ರಾಯಚೂರು ಜಿಲ್ಲಾ ವೀರಶೈವ ಸಮಾಜದಿಂದ ಜೂ.7 ರಿಂದ 21 ವರೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಪ್ರತಿದಿನ ಸಂಜೆ 6.30 ರಿಂದ 8.30 ವರೆಗೆ ಶ್ರೀ ಅಲ್ಲಮ ಪ್ರಭುಗಳ ಜೀವನ ಚರಿತ್ರೆಯ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆಂದು ಸಮಾಜದ ಅಧ್ಯಕ್ಷ ಶರಣ ಭೂಪಾಲ ನಾಡಗೌಡ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.7ರಂದು ಜ್ಞಾನದಾಸೋಹ ಕಾರ್ಯಕ್ರಮದ ಸಾನಿಧ್ಯವನ್ನು ಬಿಚ್ಚಾಲಿ ಮಠದ ಶ್ರೀ ವೀರಭದ್ರ ಶಿವಾಚಾರ್ಯರು, ಸೋಮವಾರಪೇಟೆ ಮಠದ ಶ್ರೀ ಅಭಿನವ ರಾಚೋಟಿ ವೀರ ಶಿವಾಚಾರ್ಯರು, ಸುಲ್ತಾನಪುರದ ಶ್ರೀ ಶಂಭು ಸೋಮನಾಥ ಶಿವಾಚಾರ್ಯರು, ಮಂಗಳವಾರಪೇಟೆ ಮಠದ ಶ್ರೀ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳುವಹಿ ಸಲಿದ್ದಾರೆ.
ಉದ್ಘಾಟನೆಯನ್ನು ಶಾಸಕ ಡಾ.ಶಿವರಾಜ ಪಾಟೀಲ್ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ.ಎಸ್.ಪಾಟೀಲ್, ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಚಿವ ಅಮರೇಗೌಡ ಭಯ್ಯಪುರು, ಬಸನಗೌಡ ಬ್ಯಾಗವಾಟ್, ಹರವಿ ನಾಗನಗೌಡ, ರಾಚನಗೌಡ ಕೋಳೂರು ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಶರಣಭೂಪಾಲ ನಾಡಗೌಡವಹಿಸಲಿದ್ದಾರೆ. ಪ್ರತಿನಿತ್ಯ ಪ್ರವಚನವನ್ನು ಶ್ರೀ ಚರಮೂರ್ತಿ ಚರಂತೇಶ್ವರ ಮಠದ ಶ್ರೀ ಶರಣಬಸವ ಅಪ್ಪ ಅವರು ನೀಡಲಿದ್ದಾರೆ.
ಜೂ.21 ರಂದು ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಸಾನಿಧ್ಯವನ್ನು ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರು, ಗಬ್ಬೂರು ಬೂದಿಬಸವೇಶ್ವರ ಸಂಸ್ಥಾನದ ಶ್ರೀ ಬೂದಿಬಸವ ಶಿವಾಚಾರ್ಯರು, ಮಾನವಿ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರ ಮಹಾಸ್ವಾಮಿಗಳು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಪುರು, ಬಸನಗೌಡ ಬಾದರ್ಲಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಶರಣಪ್ಪ ಮೇಟಿ, ಚಂದ್ರಶೇಖರ ಪಾಟೀಲ್ ಮಿರ್ಜಾಪುರು, ಶಿವಶರಣರೆಡ್ಡಿ ಕಲ್ಲೂರು ಆಗಮಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಅಶೋಕ ಪಾಟೀಲ್ ಅತ್ತನೂರು, ಶಿವುಕುಮಾರ ಚುಕ್ಕಿ, ಬಂಡಿ ವಿರುಪನಗೌಡ ಇದ್ದರು.