ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ದಿ. ಎಸ್.ಜಿ. ನಾಡಗೀರ ಸ್ಮರಣಾರ್ಥ ದತ್ತಿ ಅಂಗವಾಗಿ ಮಾ. 10ರಂದು ಸಂಜೆ 6 ಗಂಟೆಗೆ ಸಂಘದ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿ `ವ್ಯಕ್ತಿತ್ವ ವಿಕಸನದಲ್ಲಿ ಮನೋಭೂಮಿಕೆ' ವಿಷಯ ಕುರಿತು ಉಪನ್ಯಾಸ ಏರ್ಪಡಿಸಿದೆ. ಸಂಘದ ಗೌರವ ಉಪಾಧ್ಯಕ್ಷ ಡಾ. ಆನಂದ ಪಾಂಡುರ0ಗಿ ಉಪನ್ಯಾಸಕ ನೀಡುವರು. ಕೆಪಿಟಿಸಿಎಲ್ ನಿವೃತ್ತ ಮುಖ್ಯ ಇಂಜಿನಿಯರ್ ಅರುಣ ಎಸ್. ನಾಡಗೀರ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.