ಜಿಲ್ಲೆ

ಕೃತಿಗಳಿಂದ ವೈಜ್ಞಾನಿಕ, ವೈಚಾರಿಕ ಪ್ರಜ್ಞೆಯ ಬೆಳವಣಿಗೆ...

ಡಾ. ಗಣನಾಥ ಶೆಟ್ಟಿ ಎಕ್ಕಾರು ಅನಿಸಿಕೆ

ಅರಿವಿನ ಬೆಳಕು ಉಪನ್ಯಾಸ ಮಾಲಿಕೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಒಳ್ಳೆಯ ಕೃತಿಗಳು ಜನರ ಬದುಕಿಗೆ ಮಾರ್ಗದರ್ಶನ ನೀಡಬಹುದಾಗಿದೆ. ಹೀಗಾಗಿ ಯುವಪೀಳಿಗೆಗೆ ಸಾಹಿತ್ಯದ ಪ್ರಕಾರಗಳನ್ನು ಪರಿಚಯಿಸುವುದರ ಜತೆಗೆ ಡಾ. ಶಿವರಾಮ ಕಾರಂತ ಅವರನ್ನು ಕೇಂದ್ರವಾಗಿಟ್ಟುಕೊಂಡು ವಿದ್ಯಾರ್ಥಿಗಳಲ್ಲಿ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಉದ್ದೇಶ ಹೊಂದಿದ್ದೇವೆ. ಈ ಜ್ಞಾನಗಳಿಂದ ವಿದ್ಯಾರ್ಥಿ ಜೀವನದಲ್ಲಿಯೇ ಸಬಲರಾಗಲು ಸಾಧ್ಯ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್​ನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಅನಿಸಿಕೆ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲೆಯ ಡಾ. ಶಿವರಾಮ ಕಾರಂತ ಟ್ರಸ್ಟ್​ ವತಿಯಿಂದ ಹಾಗೂ ಸುರತ್ಕಲ್​ನ ಗೋವಿಂದದಾಸ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ತೋಕೂರಿನ ಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅರಿವಿನ ಬೆಳಕು ಉಪನ್ಯಾಸ ಮಾಲಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರಂತರ ಪರಿಸರ ಕಾಳಜಿ

ಹಿರಿಯ ಪತ್ರಕರ್ತ ನಿತ್ಯಾನಂದ ಪಡ್ರೆ ಉಪನ್ಯಾಸ ನೀಡಿ ಮಾತನಾಡಿ, ಕಾರಂತರು ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಅವರ ಪುಸ್ತಕಗಳಲ್ಲಿಯೂ ಪರಿಸರದ ವರ್ಣನೆ ಇದ್ದು, ಸುಂದರವಾಗಿ ಮೂಡಿಬಂದಿದೆ. ವಿದ್ಯಾರ್ಥಿಗಳೂ ಸಹ ಪರಿಸರ ರಕ್ಷಣೆ ಹಾಗೂ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದರು.

ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲ ಹರೀಶ್​ ಆಚಾರ್ಯ ಪಿ. ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ಡಾ. ಶಿವರಾಮ ಕಾರಂತ ಟ್ರಸ್ಟ್​ನ ಸದಸ್ಯೆ ಡಾ.ಭಾರತಿ ಮರವಂತೆ ಮಾತನಾಡಿದರು.

ಕಾಲೇಜಿನ ಎನ್​ಎಸ್​ಎಸ್​ನ ಯೋಜನಾಧಿಕಾರಿ ಅಕ್ಷತಾ ವಿ., ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಪತ್​ ಎಸ್​.ಪಿ., ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಅದಿಶ್​ ಸ್ವಾಗತಿಸಿದರು. ಸುಪ್ರೀತ್​ ಕಾರ್ಯಕ್ರಮ ನಿರೂಪಿಸಿದರು. ದೀಕ್ಷಾ ವಂದಿಸಿದರು.