ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ಗದಿಗೆಯ್ಯ ಹೊನ್ನಾಪುರಮಠ ದತ್ತಿ ನಿಮಿತ್ತ ಜ. 7ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಪತ್ರಿಕಾ ಮಾಧ್ಯಮ ಮತ್ತು ಕೃತಕ ಬುದ್ಧಿಮತ್ತೆ ವಿಷಯ ಕುರಿತು ಉಪನ್ಯಾಸ ಏರ್ಪಡಿಸಿದೆ.
ಪತ್ರಕರ್ತ ಹೃಷಿಕೇಶ ಬಹದ್ದೂರ ದೇಸಾಯಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಸಾಹಿತಿಗಳು, ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ.