ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂವು ದಿ. ಎನ್.ಕೆ. ಜೋಗಳೇಕರ ಸ್ಮರಣಾರ್ಥ ದತ್ತಿ ನಿಮಿತ್ತ ಜೂ. 10ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಭವನದಲ್ಲಿ ಭಾರತೀಯ ಜ್ಯೋತಿಷ್ಯಶಾಸ್ತ್ರ ಮತ್ತು ವೈಜ್ಞಾನಿಕ ಚಿಂತನೆಗಳು ಕುರಿತು ಉಪನ್ಯಾಸ ಏರ್ಪಡಿಸಿದೆ. ಸಂಸತ ಉಪನ್ಯಾಸಕ ವಿದ್ವಾನ್ ನವೀನಶಾಸ್ತ್ರಿ ಪುರಾಣಿಕ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಡಾ. ಆನಂದ ಹಂದಿಕಗೋಳ ಅಧ್ಯತೆ ವಹಿಸುವರು. ದತ್ತಿ ದಾನಿ ಸುಹಾಸ ಜೋಗಳೇಕರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.