ಜಿಲ್ಲೆ

ಉಪನ್ಯಾಸ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ಡಾ. ದಿನೇಶ ಪರಡ್ಡಿ ಸ್ಮರಣಾರ್ಥ ದತ್ತಿ ನಿಮಿತ್ತ ಸೆ. 2ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಭವನದಲ್ಲಿ ಜೀವನ ಧರ್ಮ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿದೆ. ಅತಿಥಿ ಉಪನ್ಯಾಸಕರಾಗಿ ಪರಮಹಂಸ ಯೋಗ ಪೀಠದ ಡಾ. ಶೋಭಾ ಹೂಲಿಕಟ್ಟಿ ಆಗಮಿಸುವರು. ಕವಿವ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.