ಜಿಲ್ಲೆ

ಕಾನೂನು ಸಲಹಾ ಕೇಂದ್ರ ಉದ್ಘಾಟನೆ "ವೀರ ಪರಿವಾರ್​' ಸಹಾಯವಾಣಿ ಜಾರಿಗೆ

ವಿಜಯಪುರ:ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗೆ "ವೀರ ಪರಿವಾರ್​' ಸಹಾಯವಾಣಿ ಯೋಜನೆ ಜಾರಿಗೆ ಬಂದಿದ್ದು ಅದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ ಎ. ಹೇಳಿದರು.ನಗರದ ಮಾಜಿ ಸೈನಿಕರ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆಯ ಸಭಾ ಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗೆ "ವೀರ ಪರಿವಾರ್​' ಸಹಾಯವಾಣಿ ಯೋಜನೆಯ ಕಾನೂನು ಸಲಹಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ಸದರಿ ಯೋಜನೆಯೂ ಕೇಂದ್ರೀಯ ಸೈನಿಕ ಮಂಡಳಿಯ ಸಹಯೋಗದೊಂದಿಗೆ ಮೀಸಲಾದ ಕಾನೂನು ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗಾಗಿ ಈ ಯೋಜನೆ ಇಂದು ರಾಜ್ಯದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಮಂಗಳೂರು, ಹಾಸನ, ಕಲಬುರ್ಗಿ, ಕೊಡಗು, ಮೈಸೂರು, ಶಿವಮೊಗ್ಗ, ಕಾರವಾರ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಆವರಣಗಳಲ್ಲಿ ಲೊಕಾರ್ಪಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಯೋಜನೆಯಿಂದ ಕಾನೂನಿನ ತೊಡಕುಗಳಿದ್ದಲ್ಲಿ ಭೇಟಿಮಾಡಿ ತಮ್ಮ ಸಮಸ್ಯೆಗಳನ್ನು ಬಗೆಹರಿಕೊಳ್ಳಬಹುದಾಗಿದೆ. ಈ ಯೋಜನೆಯು ಉಚಿತವಾಗಿ ಕಾನೂನಿನ ಅರಿವು ಮತ್ತು ನೆರವಿನ ಸೇವೆಯನ್ನು ಒದಗಿಸುವ ಗುರಿ ಹೊಂದಿದೆ. ರಾಜ್ಯದಲ್ಲಿ ಲೋಕ ಅದಾಲತ್​ ಕಾನೂನು ಮೂಲಕ ನೊಂದವರ, ದುರ್ಬಲ, ಶೋಷಿತ, ಬಡವರು, ಹಿರಿಯ ನಾಗರಿಕರು ಮತ್ತು ಯಾವುದೇ ಕಾನೂನು ತೊಡಕುಗಳಿದ್ದಲ್ಲಿ ಆಸ್ತಿ ವಿವಾದ, ವೈವಾಹಿಕ ಸಮಸ್ಯಗಳು, ಆರ್ಥಿಕವಾಗಿ ಸಮರ್ಥರಿಲ್ಲದವರಿಗೆ ಉಚಿತವಾಗಿ ಕಾನೂನು ಸಲಹೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೆಶಕ ವಿನಯಕುಮಾರ ಪಾಟೀಲ, ಜಿಲ್ಲಾ ವಕೀಲರ ಸಂದ ಅಧ್ಯಕ್ಷ ಡಿ.ಜಿ. ಬಿರಾದಾರ, ಸಂದ ಕಾರ್ಯದರ್ಶಿ ಎಸ್​.ಎಸ್​. ಚೂರಿ, ಪೆನೆಲ್​ ವಕೀಲ ಜಾವೀದ ಗುಡಗುಂಟಿ ಮತ್ತಿತರರಿದ್ದರು.

ವಿಜಯಪುರದ ಮಾಜಿ ಸೈನಿಕರ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆಯ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಕಾನೂನು ಸಲಹಾ ಕೇಂದ್ರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ. ಎ. ಉದ್ಘಾಟಿಸಿದರು. ಅರವಿಂದ ಹಾಗರಗಿ, ವಿನಯಕುಮಾರ ಪಾಟೀಲ, ಡಿ.ಜಿ. ಬಿರಾದಾರ ಇತರರಿದ್ದರು.