ಜಿಲ್ಲೆ

ಕಾನೂನು ಅರಿವು-ನೆರವು ಕಾರ್ಯಕ್ರಮ

ಅವಿನಾಶ್ ಜೈನಹಳ್ಳಿ

ಜೆಎಸ್‌ಎಸ್ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಆ. 21ರಂದು ಬೆಳಗ್ಗೆ 11 ಗಂಟೆಗೆ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಆಯೋಜಿಸಿದೆ.

ನಗರದ ಜೆಎಸ್‌ಎಸ್ ಹಳೇ ಆಸ್ಪತ್ರೆ ಆವರಣದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಜಿ.ದಿನೇಶ್ ಉದ್ಘಾಟಿಸಲಿದ್ದಾರೆ. ಜೆಎಸ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸಿ.ಪಿ.ಮಧು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ವಿ.ಜ್ಯೋತಿ ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ವಕೀಲೆ ಆಯಿಷಾ ಬಾನು ಭಾಗವಹಿಸಲಿದ್ದು, ‘ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರ ಕಾನೂನು ಮತ್ತು ಹಕ್ಕುಗಳ ಬಗ್ಗೆ’ ವಿಷಯ ಮಂಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.