ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಪೋಕ್ಸೋ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಕಳದ ವಕೀಲ ಭವಿಷ್ ಕುಂದರ್, ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಮತ್ತಿತರರಿದ್ದರು. 
ಜಿಲ್ಲೆ

ಮಕ್ಕಳ ಸುರಕ್ಷತೆ ಸಮಾಜದ ಹೊಣೆಗಾರಿಕೆ : ವಕೀಲ ಭವಿಷ್ ಕುಂದರ್

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ರಚನೆಯಾಗಿರುವ ಕಠಿಣ ಕಾನೂನುಗಳಿಂದ ಪಾಲಕರು ಮತ್ತು ಮಕ್ಕಳು ಸಹಜ ಬದುಕನ್ನು ನಡೆಸಲು ಸಹಕಾರಿಯಾಗಿದೆ. ಮಕ್ಕಳ ಸುರಕ್ಷತೆ ಸಮಾಜದ ಹೊಣೆಗಾರಿಕೆ ಎಂದು ಕಾರ್ಕಳದ ವಕೀಲ ಭವಿಷ್ ಕುಂದರ್ ತಿಳಿಸಿದರು.

ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಪೋಕ್ಸೋ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಮಗಾದ ದೌರ್ಜನ್ಯದ ಬಗ್ಗೆ ಧೈರ್ಯವಾಗಿ ಹೆತ್ತವರ ಬಳಿ ಹೇಳಿಕೊಳ್ಳಬೇಕು. ಕಾನೂನಿನ ಮೊರೆ ಹೋಗಬೇಕು ಎಂದರು.

ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ, ಕಾನೂನು ಎಲ್ಲರಿಗೂ ಸಮಾನವಾಗಿದೆ. ಬಾಲ್ಯವೆಂಬುದು ಭವಿಷ್ಯಕ್ಕೆ ಭದ್ರ ಬುನಾದಿಯಾಗಿದೆ. ಇಲ್ಲಿ ಅನುಭವಿಸುವ ಮಾನಸಿಕ ಕಿರುಕುಳ ಭವಿಷ್ಯವನ್ನೇ ಹಾಳು ಮಾಡುತ್ತದೆ. ಕಾನೂನಿನ ನೆರವು ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ತೇಜಸ್ವೀ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚಂದ್ರಶೇಖರ್ ಸ್ವಾಗತಿಸಿದರು. ಅಭಿನವ್ ಅತಿಥಿ ಪರಿಚಯ ಮಾಡಿದರು. ಅಪೇಕ್ಷಾ ನಿರೂಪಿಸಿದರು. ಸಮೀಕ್ಷಾ ವಂದಿಸಿದರು.