ಜಿಲ್ಲೆ

ಭೂಮಿ ಹಕ್ಕಿಗಾಗಿ ಕಾನೂನು ಹೋರಾಟ ಅತ್ಯಗತ್ಯ

ಬಸವರಾಜ ವೀರಪ್ಪ ಗರಗ

ಮುಂಡಗೋಡ: ಅರಣ್ಯ ಭೂಮಿ ಹಕ್ಕಿಗಾಗಿ ಸಾಂಘಿಕ ಹೋರಾಟ ಮಾತ್ರ ಸಾಕಾಗದು. ಕಾನೂನು ಹೋರಾಟವೂ ಅತ್ಯವಶ್ಯಕ. ಹಕ್ಕಿಗಾಗಿ ಕಾನೂನಾತ್ಮಕ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ತಾಲೂಕಿನ ಬೆಡಸಗಾಂವ ಗ್ರಾಮ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅರಣ್ಯವಾಸಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಅರಣ್ಯವಾಸಿಗಳು ಭೂಮಿ ಹಕ್ಕಿಗಾಗಿ ಕಾನೂನು ಜ್ಞಾನ ವೃದ್ಧಿಸಿಕೊಳ್ಳಬೇಕು. ಕಾನೂನು ಅಜ್ಞಾನದಿಂದ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗಬಾರದು ಎಂದರು. ಅರಣ್ಯ ಭೂಮಿಯ ಹಕ್ಕು ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ‘ನ. 21ರಂದು ಬೆಂಗಳೂರು ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಅತಿಕ್ರಮಣದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ಅತಿಕ್ರಮಣದಾರರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಜೋಗಿ, ದೇವೇಂದ್ರ ನಾಯ್ಕ,

ಗಣಪತಿ ನಾಯ್ಕ, ನೆಹರು ನಾಯ್ಕ ಬಿಳೂರು, ಎಂ.ಆರ್. ನಾಯಕ, ಕಂಡ್ರಾಜಿ, ಇತರರಿದ್ದರು.