ಜಿಲ್ಲೆ

ಕವಿವಿ ಹೊರವಲಯದಲ್ಲಿ ಚಿರತೆ ಸೆರೆಗೆ ಬೋನು

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಚಿರತೆಯ ಸೆರೆಗೆ ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ವಿಶ್ವವಿದ್ಯಾಲಯದ ಗ್ರಂಥಾಲಯ ರಸ್ತೆಯಲ್ಲಿ ಕೆಲ ದಿನಗಳ ಹಿಂದೆ ಬೈಕ್ ಸವಾರ ಸಂಚರಿಸುತ್ತಿದ್ದ ವೇಳೆ ಚಿರತೆ ಕಾಣಿಸಿಕೊಂಡಿತ್ತು. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಅರಣ್ಯ ಇಲಾಖೆ ಅಽಕಾರಿಗಳ ಗಮನಕ್ಕೆ ಬಂದ ನಂತರ ವಿಶ್ವವಿದ್ಯಾಲಯ ಆವರಣದ ಕೆಲವೆಡೆ ಕೆಲವೆಡೆ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಇಲಾಖೆಯ ಕ್ಯಾಮರಾದಲ್ಲೂ ಚಿರತೆಯ ಸಂಚಾರ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯಿಂದ 3- 4 ಕಡೆಗಳಲ್ಲಿ ಬೋನುಗಳನ್ನು ಇಡಲಾಗಿದೆ.
ಸಂಚಾರ ನಿರ್ಬಂಧ: ಅರಣ್ಯ ಇಲಾಖೆಯಿಂದ ಶನಿವಾರ ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚಾರವನ್ನು ನಿರ್ಬಂಽಸಿ ಕುಲಸಚಿವ ಸುತ್ತೋಲೆ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು, ಸಿಬ್ಬಂದಿ, ಸುತ್ತಲಿನ ವಸತಿಗೃಹಗಳಲ್ಲಿ ಇರುವ ನಿವಾಸಿಗಳು ಗಾಂಽ ಭವನದಿಂದ ಗ್ರಂಥಾಲಯ ಮಾರ್ಗದಲ್ಲಿ ಸಂಚರಿಸಬಾರದು ಎಂದು ಕುಲಸಚಿವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.