ಜಿಲ್ಲೆ

ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವು !

ಜಗನ್ನಾಥ್ ಕಾಳೇನಹಳ್ಳಿ

ತುಮಕೂರು:

ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಕರೇಗೌಡನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಚಿರತೆಯೊಂದು ಬಲಿಯಾಗಿದೆ.

ಗ್ರಾಮದಲ್ಲಿ ಮರದಿಂದ ಮರಕ್ಕೆ ಹಾರುವಾಗ ಚಿರತೆ ಮರಿ ಆಯತಪ್ಪಿ ವಿದ್ಯುತ್

ಟ್ರಾನ್ಸ್‌ಫಾರ್ಮರ್ ಮೇಲೆ ಬಿದ್ದಿದ್ದು ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವನ್ನಪ್ಪಿದೆ.

2 ರಿಂದ 3 ವರ್ಷದ ಹೆಣ್ಣು ಚಿರತೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗುಬ್ಬಿ ತಾಲೂಕಿನ ಸಿಎಸ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.