ಜಿಲ್ಲೆ

ಮರದ ಮೇಲಿಂದ ಬಿದ್ದು ಗಾಯಗೊಂಡ ಚಿರತೆ

Gadag - Desk - Tippanna Avadoot

ದಾಂಡೇಲಿ: ಮೌಳಂಗಿ ಅರಣ್ಯ ವ್ಯಾಪ್ತಿಯಲ್ಲಿನ ಕೊಂಡಪಾ ಸಮೀಪ ಭಾನುವಾರ ಮಧ್ಯಾಹ್ನ ಚಿರತೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿದೆ.

ಕೊಂಡಪಾ ಗ್ರಾಮಸ್ಥರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಮೌಳಂಗಿ ವಲಯ ಅರಣ್ಯಾಧಿಕಾರಿ ಆನಂದ ರಾಠೋಡ ಹಾಗೂ ಸಿಬ್ಬಂದಿ ಆಗಮಿಸಿ ಗಾಯಗೊಂಡ ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಪಶು ವೈದ್ಯಾಧಿಕಾರಿ ಅರ್ಚನಾ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಸುಮಾರು ಒಂದೂವರೆ ವರ್ಷದ ಚಿರತೆ ಇದಾಗಿದ್ದು, ಮರದ ಮೇಲಿಂದ ಬಿದ್ದು ಗಾಯಗೊಂಡಿರಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಶಂಕೆ ವ್ಯಕ್ತಪಡಿಸಿದ್ದಾರೆ. ಚಿರತೆಯ ನಿತ್ರಾಣ ಸ್ಥಿತಿಯಲ್ಲಿದ್ದು ಹಿಂದಿನ ಭಾಗಕ್ಕೆ ತೀವ್ರ ಪೆಟ್ಟಾಗಿದೆ.