ಜಿಲ್ಲೆ

ಕೊಕ್ರಾಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಸೌಮ್ಯ ಆರ್

ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿ.ಕೆ. ಅವರ ಜಾಗದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ರಾತ್ರಿ ಚಿರತೆ ಬಿದ್ದಿದೆ. ಹಲವು ದಿನಗಳಿಂದ ಗ್ರಾಮದಲ್ಲಿ ನಾಯಿ, ಕೋಳಿ, ಬೆಕ್ಕು, ಜಾನುವಾರುಗಳ ಮೇಲೆ ಚಿರತೆ ದಾಳಿ ಮಾಡಿತ್ತು. ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಮಾಡಿದ್ದ ಮನವಿಯಂತೆ ಬೋನು ಇಡಲಾಗಿತ್ತು. ಬೋನಿಗೆ ಬಿದ್ದ ಚಿರತೆಯನ್ನು ವೀಕ್ಷಿಸಲು ಸಾರ್ವಜನಿಕರು ಜಮಾಯಿಸಿದ್ದರು. ಮೇಲಧಿಕಾರಿಗಳ ಸೂಚನೆಯಂತೆ ಚಿರತೆಯನ್ನು ದೂರದ ಕಾಡಿಗೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಭರತ್ ತಿಳಿಸಿದ್ದಾರೆ.