ಸಿಂಧನೂರು: ಕುಷ್ಠರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆ ಜತೆಗೆ ಕೈಜೋಡಿಸಿ ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಹೇಳಿದರು. ಬಸವ ನಗರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದನ್ನೂ ಓದಿ: ಕುಷ್ಠರೋಗದತ್ತ ವೈಜ್ಞಾನಿಕ ಚಿಂತನೆ ಇರಲಿ
ಚರ್ಮದ ಮೇಲೆ ಯಾವುದೇ ಮಚ್ಚೆಗಳಿದ್ದರೆ, ಸ್ಪರ್ಶಕ್ಕೆ ಬಾರದಿದ್ದರೆ ಚಿಕಿತ್ಸೆಗೆ ಒಳಪಡಬೇಕು. ತಿಳಿ,ಬಿಳಿ ತಾಮ್ರ ಬಣ್ಣದ ಮಚ್ಚೆಗಳಿದ್ದರೆ ಹತ್ತಿರದ ನಗರ ಆರೋಗ್ಯ ಕೇಂದ್ರ ಅಥವಾ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ್ ಮಾತನಾಡಿದರು. ಆಶಾ ಕಾರ್ಯಕರ್ತೆರು, ಆರೋಗ್ಯ ಸಿಬ್ಬಂದಿ ಇದ್ದರು.