ಜಿಲ್ಲೆ

ಡೆಂೆ ನಿಯಂತ್ರಣಕ್ಕೆ ವಿಶೇಷ ಟಾಸ್ಕ್‌ಫೋರ್ಸ್ ರಚಿಸಲಿ: ಮಾಜಿ ಮೇಯರ್ ಶಿವಕುಮಾರ್ ಒತ್ತಾಯ

ಆರ್.ಕೃಷ್ಣ

ಮೈಸೂರು: ನಗರದಲ್ಲಿ ಡೆಂೆ ನಿಯಂತ್ರಣಕ್ಕೆ ಮೈಸೂರು ಮಹಾ ನಗರ ಪಾಲಿಕೆ ವಿಶೇಷ ಟಾಸ್ಕ್‌ಫೋರ್ಸ್ ರಚಿಸಬೇಕು ಎಂದು ಮಾಜಿ ಮೇಯರ್ ಶಿವಕುಮಾರ್ ಒತ್ತಾಯಿಸಿದ್ದಾರೆ.
ನಗರದಲ್ಲಿ 145 ಡೆಂೆ ಪ್ರಕರಣಗಳು ವರದಿಯಾಗಿದ್ದು, ಡೆಂೆ ಶಂಕೆಯಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಈ ಹಿನ್ನ್ನೆಲೆಯಲ್ಲಿ ಮೈಸೂರು ನಗರಪಾಲಿಕೆಯು ಡೆಂೆ ನಿಯಂತ್ರಣಕ್ಕೆ ವಿಶೇಷ ಕ್ರಮ ಕೈಗೊಳ್ಳಬೇಕಾಗಿದೆ. ವಿಶೇಷವಾಗಿ ಟಾಸ್ಕ್‌ಫೋರ್ಸ್ ರಚಿಸುವ ಮೂಲಕ ನಗರದ ಎಲ್ಲ ವಾರ್ಡ್‌ಗಳಲ್ಲಿ ವಿಶೇಷವಾಗಿ ಸ್ವಚ್ಛತಾ ಕಾರ್ಯ ನಡೆಸಬೇಕಾಗಿದೆ ಎಂದು ಹೇಳಿಕೆಯಲ್ಲಿ ಪಾಲಿಕೆಗೆ ಮನವಿ ಮಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸುವುದರೊಂದಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಫಾಗಿಂಗ್ ನಡೆಸುವ ಮೂಲಕ ಸೊಳ್ಳೆಗಳ ನಿಯಂತ್ರಣ ಕಾರ್ಯಾಚರಣೆ ಪ್ರಾರಂಭಿಸಬೇಕು. ಮೈಸೂರನ್ನು ಡೆಂಘೆ ರೋಗ ಮುಕ್ತನಗರವನ್ನಾಗಿ ಮಾಡಲು ಜನರ ಸಹಕಾರ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಪಾಲಿಕೆ ಕಠಿಣ ಕ್ರಮ ವಹಿಸಬೇಕಿದೆ ಎಂದು ಹೇಳಿದರು.