ಹುಕ್ಕೇರಿ: ಇತ್ತೀಚಿನ ದಿನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಸರ್ಕಾರಿ ಶಾಲೆಗಳು ಹೆಚ್ಚು ಸೌಲಭ್ಯದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಹೀಗಾಗಿ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಓದಿಸಬೇಕೆಂದು ಉದ್ಯಮಿ ಪೃಥ್ವಿ ಕತ್ತಿ ಹೇಳಿದರು.
ತಾಲೂಕಿನ ಅಮ್ಮಣಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಹಭಾಗಿತ್ವದಲ್ಲಿ ಗುರುವಾರ ಆಯೋಜಿಸಿದ್ದ ರಾಗಿ ಮಾಲ್ಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮಕ್ಕಳ ಆರೋಗ್ಯ ದೃಷ್ಟಿಯಿಂದ ಹಾಗೂ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಕ್ಷೀರಭಾಗ್ಯ ಮತ್ತು ರಾಗಿ ಮಾಲ್ಟ್ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.
ಬಿಇಒ ಪ್ರಭಾವತಿ ಪಾಟೀಲ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸಲು ರಾಗಿ ಮಾಲ್ಟ್ ವಿತರಿಸಲಾಗುತ್ತಿದೆ ಎಂದರು.
ಮುಖ್ಯೋಪಾಧ್ಯಾಯ ಎಸ್.ಡಿ.ನಾಯಿಕ ಮಾತನಾಡಿದರು. 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಸಾಧನೆ ಮಾಡಿದ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರನ್ನು ಸತ್ಕರಿಸಲಾಯಿತು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎ.ಎಸ್. ಪದ್ಮನ್ನವರ, ಅಕ್ಷರ ದಾಸೋಹ ನಿರ್ದೇಶಕಿ ಸವಿತಾ ಹಲಕಿ, ಅಧಿಕಾರಿಗಳಾದ ಶ್ರೀಶೈಲ ಹಿರೇಮಠ, ಪ್ರೀತಂ ನಿಡಸೋಸಿ, ಆರ್.ಆರ್.ಗಸ್ತಿ, ಆರ್.ಎಂ. ನಡುವಿನಮನಿ, ಅನಿಲ ಮಾಳಗೆ, ಎಸ್‌ಡಿಎಂಸಿ ಅಧ್ಯಕ್ಷ ಈರಪ್ಪ ನಾಗೌಡ, ಉಪಾಧ್ಯಕ್ಷ ಸಂಜು ಕೋಕಿತಕರ, ಪ್ರಶಾಂತ ಪಾಟೀಲ, ಬಾಳಾಸಾಹೇಬ ಜಾಧವ, ದಸ್ತಗಿರ್ ನದ್ಾ, ಶಿವಶಂಕರ ಹುದ್ದಾರ, ಜೆ.ವಿ.ಕರೋಶಿ ಇತರರಿದ್ದರು.