ಬೇಲೂರು: ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್ ಆಪರೇಟರ್‌ಗಳ ಅವಶ್ಯಕತೆ ತುಂಬ ಇದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತ ಕುಮಾರ್ ಹೇಳಿದರು.
ಫಾದರ್ ಆಫ್ ಕಂಪ್ಯೂಟರ್ ಚಾರ್ಲ್ಸ್ ಬ್ಯಾಬೇಜ್ ಜನ್ಮ ದಿನದ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಡಾಟಾ ಎಂಟ್ರಿ ಆಪರೇಟರ್ ದಿನವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ಸಿಗಬೇಕಾದರೆ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುವ ಕಂಪ್ಯೂಟರ್ ಆಪರೇಟರ್‌ಗಳು ಜನರಿಗೆ ಸರಿಯಾದ ಮಾಹಿತಿ ನೀಡಿ ಸ್ಪಂದಿಸಿ ಸೌಲಭ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಆಗ ನೀವು ಮಾಡುವ ಕೆಲಸಕ್ಕೆ ಉತ್ತಮ ಹೆಸರು ಬರುತ್ತದೆ ಎಂದರು.
ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಸಂಘದ ಅಧ್ಯಕ್ಷ ನಾರ್ವೆಪೇಟೆ ರಾಜು ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಸೂಕ್ತ ಸಮಯದಲ್ಲಿ ನೀಡಲಾಗುತ್ತಿದೆ. ಹಾಗೂ ಕಚೇರಿಗೆ ಬರುವವರೊಂದಿಗೆ ಸೌಜನ್ಯದಿಂದ ಸ್ಪಂದಿಸಿ ಕೆಲಸ ಮಾಡಲಾಗುತ್ತಿದೆ. ಜತೆಗೆ ಗ್ರಾಮ ಪಂಚಾಯಿತಿಗಳಿಗೆ ಉತ್ತಮ ಹೆಸರು ಬರುವುದರಲ್ಲಿಯೂ ಆಪರೇಟ್‌ಗಳ ಪಾತ್ರ ಮುಖ್ಯವಾಗಿದೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಖಜಾಂಚಿ ಸಂತೋಷ್, ನಿರ್ದೇಶಕ ನಂದಕುಮಾರ್, ಗ್ರಾಮ ಪಂಚಾಯಿತಿ ಡಾಟಾ ಆಪರೇಟರ್‌ಗಳಾದ ಯಶವಂತ್, ಬಸವರಾಜು, ಶಿವಕುಮಾರ್, ಶಿವರಾಜ್, ನೂತನ್, ಸುನೀಲ್ ಇತರರು ಇದ್ದರು.