ಜೊಯಿಡಾ: ಮಕ್ಕಳಲ್ಲಿಯ ಪ್ರತಿಭೆಯನ್ನು ಗುರುತಿಸುವ ಕಾರ್ಯಕ್ರಮ ಪ್ರತಿಭಾ ಕಾರಂಜಿಯಾಗಿದೆ. ನಿರ್ಣಾಯಕರು ತಾರತಮ್ಯ ಮಾಡದೆ ಪ್ರತಿಭಾವಂತ ಮಕ್ಕಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಬೇಕು ಎಂದು ತಹಸೀಲ್ದಾರ್ ಮಂಜುನಾಥ ಮುನ್ನೋಳಿ ಹೇಳಿದರು.
ಕುಣಬಿ ಭವನದಲ್ಲಿ ಗುರುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್. ಭಾರತಿ ಮಾತನಾಡಿ, ಜೊಯಿಡಾ ತಾಲೂಕಿನ ಮಕ್ಕಳು ಜಿಲ್ಲಾ, ರಾಜ್ಯ ಮಟ್ಟದಲ್ಲಿ ಹೆಸರು ಗಳಿಸುವಂತಾಗಲಿ ಎಂದು ಹಾರೈಸಿದರು.
ಮರಾಠಾ ಸಮಾಜದ ತಾಲುಕಾಧ್ಯಕ್ಷ ಚಂದ್ರಕಾಂತ ದೇಸಾಯಿ ಮಾತನಾಡಿದರು.
ಬಿಇಒ ಬಶಿರ್ ಅಹಮದ್ ಶೇಖ್, ಗ್ರಾ.ಪಂ. ಅಧ್ಯಕ್ಷೆ ಚಂದ್ರಿಮಾ ಮಿರಾಶಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಶಾಮ ಪೋಕಳೆ, ಮರಾಠಾ ಸಂಘದ ಅಧ್ಯಕ್ಷ ಚಂದ್ರಕಾಂತ ದೇಸಾಯಿ, ತಾಲೂಕು ನೌಕರರ ಸಂಘದ ಅಧ್ಯಕ್ಷ ಸಂತೋಷ ಸಾಳುಂಕೆ, ಪ್ರಾ.ಶಿ. ಸಂಘದ ಅಧ್ಯಕ್ಷ ಯಶವಂತ ನಾಯ್ಕ, ಎಲ್.ಎಂ.ನಾಯ್ಕ , ಸುಕನ್ಯಾ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕ ಭಾಸ್ಕರ ಗಾಂವಕರ ಕಾರ್ಯಕ್ರಮ ನಿರೂಪಿಸಿದರು.