ಅರಕಲಗೂಡು ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಅವರೊಂದಿಗೆ ಚರ್ಚಿಸಿದರು. ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ ಇದ್ದರು. 
ಜಿಲ್ಲೆ

ರೋಗಿಗಳೊಂದಿಗೆ ವೈದ್ಯರು ಸೌಜನ್ಯದಿಂದ ವರ್ತಿಸಲಿ

ಮಾದೇಶ್ ತಿ.ನರಸೀಪುರ

ಅರಕಲಗೂಡು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಸಂಸದ ಪ್ರಜ್ವಲ್ ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು ಸೌಜನ್ಯದಿಂದ ವರ್ತಿಸಿ ಉತ್ತಮ ಚಿಕಿತ್ಸೆ ನೀಡಬೇಕು. ಶುಚಿತ್ವ ಕಾಪಾಡಿಕೊಳ್ಳುವಂತೆ ಆಡಳಿತಾಧಿಕಾರಿ ಡಾ. ಸ್ವಾಮಿಗೌಡ ಅವರಿಗೆ ಸೂಚಿಸಿದರು.


ಜನೌಷಧ ಕೇಂದ್ರ ಹಾಗೂ ಆಸ್ಪತ್ರೆಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು.


ಆಸ್ಪತ್ರೆ ಮುಂಭಾಗದ ಎರಡು ಕೊಠಡಿಗಳ ಬಾಗಿಲು ಮುಚ್ಚಿದ್ದು ಸದ್ಬಳಕೆ ಮಾಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ ಅವರಿಗೆ ಸೂಚನೆ ನೀಡಿದರು.