ಬಸವರಾಜ ಸಂಗಪ್ಪನವರ  
ಜಿಲ್ಲೆ

ವೇಳಾಪಟ್ಟಿಯಂತೆ ಚುನಾವಣೆ ನಡೆಯಲಿ

ರುದ್ರಪ್ಪ ವಾಲಿ

ಹರಪನಹಳ್ಳಿ: ತಾಲೂಕಿನ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ ನಡೆಸಲು ಸರ್ಕಾರ ಆದೇಶ ಹೊರಡಿಸಿದ್ದು, ವೇಳಾಪಟ್ಟಿಯಂತೆ ಅ.9ರಂದು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಬೇಕಿತ್ತು, ಆದರೆ, ಈವರೆಗೆ ಆರಂಭವಾಗಿಲ್ಲ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪನವರ ಬೇಸರ ವ್ಯಕ್ತ ಪಡಿಸಿದ್ದಾರೆ.

ಚುನಾವಣೆ ಅಧಿಕಾರಿಗಳನ್ನು ನೇಮಕ ಮಾಡದೆ ವಿಳಂಬ ಮಾಡಲಾಗುತ್ತಿದೆ. ಕಳೆದ ತಿಂಗಳು ರಾಜ್ಯ ಸಂಘಕ್ಕೆ ಮತದಾರರ ಪಟ್ಟಿಯನ್ನು ಅನುಮೋದನೆಗೆ ಕಳಿಸಲಾಗಿತ್ತು. ಆದರೆ ಈವರೆಗೆ ಮತದಾರರ ಪಟ್ಟಿ ಬಿಡುಗಡೆಗೊಳಿಸಿಲ್ಲ.

ರಾಜ್ಯದ ಎಲ್ಲ ತಾಲೂಕುಗಳಲ್ಲಿ ವೇಳಾಪಟ್ಟಿಯಂತೆ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭಗೊಂಡಿವೆ. ಆದರೆ ನಮ್ಮ ತಾಲೂಕಿನಲ್ಲಿ ಯಾವುದೇ ಪ್ರಕ್ರಿಯೆ ನಡೆದಿಲ್ಲ. ನೌಕರರ ಸಂವಿಧಾನಾತ್ಮಕ ಚುನಾವಣೆಯಲ್ಲಿ ಮುಕ್ತವಾಗಿ ಭಾಗವಹಿಸಲು ಅವಕಾಶ ನೀಡದೆ ಗೊಂದಲ ಸೃಷ್ಟಿಸಲಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮವಹಿಸುವಂತೆ ತಹಸಿಲ್ ಹಾಗೂ ಉಪವಿಭಾಗಾಧಿಕಾರಿಗೆ ಮನವಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.