ಸಿಂಧನೂರು ಸರ್ಕಾರಿ ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭವನ್ನು ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಾಜಿ ದೇವೇಂದ್ರಪ್ಪ ಉದ್ಘಾಟಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಂಗನಗೌಡ, ಶಾರದಾ ಮಹಿಳಾ ಕಾಲೇಜು ಪ್ರಾಚಾರ್ಯ ಡಾ.ಬಸವರಾಜ ಬಾದರ್ಲಿ, ಸಹಾಯಕ ಪ್ರಾಧ್ಯಾಪಕರಾದ ಡಾ.ವೈಜನಾಥ ಸಗರಮಠ, ಹನಮಗೌಡ ಇತರರಿದ್ದರು. 
ಜಿಲ್ಲೆ

ಅಂತರಂಗದ ಅರಿವು ಕಂಡುಕೊಳ್ಳಲಿ

ಗಾಯತ್ರಿ ಮಾಲಿಪಾಟೀಲ್

ಸಿಂಧನೂರು: ಸ್ನಾತಕೋತ್ತರ ಅಧ್ಯಯನ ತಪಸ್ಸು ಇದ್ದಂತೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಸಂಶೋಧನೆಯಲ್ಲಿ ಪಾಲ್ಗೊಂಡು ಸಾಮಾಜಿಕ ಜವಾಬ್ದಾರಿ ಮೆರೆಯಬೇಕು ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಾಜಿ ದೇವೇಂದ್ರಪ್ಪ ಹೇಳಿದರು.

ನಗರದ ಸರ್ಕಾರಿ ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಂಗಳವಾರ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಅಂತರಂಗದ ಅರಿವು ಕಂಡುಕೊಂಡು ಒಳಿತಿನ ಭಾವನೆ ಪೋಷಿಸಿ ಸಮಾಜದಲ್ಲಿ ಉತ್ತಮ ನಾಗರಿಕರಾಗಬೇಕು ಎಂದರು.

ಪ್ರಾಚಾರ್ಯ ಎಂ.ಶಿವಯ್ಯ ಮಾತನಾಡಿ, ಆಧುನಿಕ ಯುಗ ಜ್ಞಾನದ ಯುಗವಾಗಿದೆ. ವಿದ್ಯಾರ್ಥಿಗಳು ಗ್ರಂಥಾಯಲವನ್ನು ಸದ್ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಮತ್ತು ಕುಟುಂಬಕ್ಕೆ ಗೌರವ ತರಬೇಕು ಎಂದು ಹೇಳಿದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಂಗನಗೌಡ ಮಾತನಾಡಿ, ಸಮಾಜಶಾಸ್ತ್ರ ಸಮಾಜ-ವಿಜ್ಞಾನಗಳ ತಾಯಿಯಾಗಿದ್ದು, ವಿದ್ಯಾರ್ಥಿಗಳು ಸಮಾಜದ ಕುಂದು ಕೊರತೆಗಳನ್ನು ಚಿಕಿತ್ಸಕ ದೃಷ್ಟಿಯಲ್ಲಿ ಅವಲೋಕಿಸಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಸಮಾಜವನ್ನು ಅಭಿವೃದ್ಧಿಯತ್ತ ಸಾಗಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು.

ಹಿರಿಯ ಶ್ರೇಣಿ ಗ್ರಂಥಪಾಲಕ ಯಲ್ಲಪ್ಪ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಂಬುತಾಯಿ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಪುಷ್ಪಾ, ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಇಶ್ರತ್ ಪಟೇಲ್, ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪರಶುರಾಮ, ಡಾ.ನಿಂಗಪ್ಪ, ಡಾ.ವಿಜಯಲಕ್ಷ್ಮೀ, ಅರ್ಥಶಾಸ್ತ್ರ ಉಪನ್ಯಾಸಕ ತಿರುಪತಿ ಇತರರಿದ್ದರು.