ವಿರಾಜಪೇಟೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಿರಾಜಪೇಟೆ ತಾಲೂಕು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿದರು. ತಹಸೀಲ್ದಾರ್ ರಾಮಚಂದ್ರ ಎಚ್. ಎನ್, ಬೊಳ್ಳಚಂಡ ಶೃಂಗ ಇತರರು ಇದ್ದರು.  
ಜಿಲ್ಲೆ

ಸಂವಿಧಾನದ ಅರಿವು ಮೂಡಿಸುವ ಕೆಲಸವಾಗಲಿ

ಮಾದೇಶ್ ತಿ.ನರಸೀಪುರ

ಗೋಣಿಕೊಪ್ಪ: ಭಾರತದ ಸಂವಿಧಾನ ರಾಷ್ಟ್ರದ ಮೂಲಭೂತ ಕಾನೂನಾಗಿದ್ದು, ಪ್ರತಿಯೊಬ್ಬರಲ್ಲೂ ಸಂವಿಧಾನದ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಲಹೆ ನೀಡಿದರು.


ವಿರಾಜಪೇಟೆ ತಾಲೂಕು ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಹೇಳಿರುವಂತೆ ದೇಶದ ನಾಗರಿಕರ ಜೀವನವೇ ಸಂವಿಧಾನವಾಗಿದೆ. ಸಂವಿಧಾನವನ್ನು ಅರಿತರೆ ಕಾನೂನು ಉಲ್ಲಂಘನೆಯಾಗುವುದಿಲ್ಲ ಎಂದು ತಿಳಿಸಿದರು.


ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ತಹಸೀಲ್ದಾರ್ ಎಚ್.ಎನ್.ರಾಮಚಂದ್ರ ಮಾತನಾಡಿ, ಸಂವಿಧಾನದ ಆಶಯದಂತೆ ಪ್ರತಿಯೊಬ್ಬರು ನಡೆದುಕೊಳ್ಳಬೇಕು ಮತ್ತು ಭಯೋತ್ಪಾದನೆ, ಭ್ರಷ್ಟಾಚಾರ, ಸ್ವಜನಪಕ್ಷಪಾತವನ್ನು ತಡೆಗಟ್ಟಬೇಕು ಎಂದು ಸಲಹೆ ನೀಡಿದರು.


ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ತಹಸೀಲ್ದಾರ್ ಎಚ್.ಎನ್.ರಾಮಚಂದ್ರ ಧ್ವಜಾರೋಹಣ ಮಾಡಿದರು. ಪೊಲೀಸ್ ಇಲಾಖೆ, ವಿವಿಧ ಶಾಲೆಗಳ ಎನ್.ಸಿ.ಸಿ., ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಬ್ಯಾಂಡ್ ಸೆಟ್ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.


ರಾಜ್ಯಪಾಲರ ಚಿನ್ನದ ಪದಕ ವಿಜೇತೆ ಹಾಗೂ ವಕೀಲೆ ಐಮಂಗಲದ ಬೊಳ್ಳಚಂಡ ಶೃಂಗಾ, ಪುರಸಭೆಯ ನೀರು ಸರಬರಾಜು ನೌಕರ ಇರ್ಫಾನ್, ಸ್ವಚ್ಛತಾ ಸಹಾಯಕ ಕುಪ್ಪುಸ್ವಾಮಿ ಹಾಗೂ ಆರ್ಜಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಪಾರ್ವತಿ ಅವರನ್ನು ಸನ್ಮಾನಿಸಲಾಯಿತು.


ರಾಷ್ಟ್ರಗೀತೆ, ನಾಡಗೀತೆ ಹಾಗೂ ರೈತಗೀತೆಯನ್ನು ಶಾಲಾ ಮಕ್ಕಳು ಹಾಡಿದರು. ವಿರಾಜಪೇಟೆ ಸಂತ ಅನ್ನಮ್ನ ಶಾಲಾ ಮಕ್ಕಳು ಪ್ರಾರ್ಥಿಸಿದರು. ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್, ಶಿಕ್ಷಣ ಇಲಾಖೆಯ ಗೀತಾಂಜಲಿ, ವಿಶಾಲಾಕ್ಷಿ, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಪದ್ಮನಾಭ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್, ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಮುಳ್ಳೆಂಗಡ ಶಂಕರಿ ಪೊನ್ನಪ್ಪ, ಪುರಸಭಾ ಅಧಿಕಾರಿ ಚಂದ್ರಕುಮಾರ್, ಪಟ್ಟಡ ರಂಜಿ ಪೂಣಚ್ಚ, ಶಬರೀಶ್ ಶೆಟ್ಟಿ ಇತರರು ಇದ್ದರು.