ಜಿಲ್ಲೆ

ಪತ್ರಕರ್ತರು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಿ

ಪ್ರಸಿನ್ ಕೆ.ಆರ್

ಮದ್ದೂರು: ಸದಾ ಒತ್ತಡದ ಬದುಕಿನಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಿಕಾ ವರದಿಗಾರರು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕೆಂದು ಎಪಿಎಂಸಿ ಮಾಜಿ ನಿರ್ದೇಶಕ ಎಸ್.ಶಿವರಾಜು ಹೇಳಿದರು. ಪಟ್ಟಣದ ಎಚ್.ಕೆ.ವೀರಣ್ಣಗೌಡ ಕಾಲೇಜು ಆವರಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ ಮತ್ತು ಕುಟುಂಬ ಸದಸ್ಯರಿಗೆ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.

ದಿನನಿತ್ಯ ಒಂದಿಲ್ಲೊಂದು ಹೊಸತನ ಹುಡುಕುವ ಸಮಯದಲ್ಲಿ ತಮ್ಮ ಕುಟುಂಬದ ಸಮಯ ಮರೆತು ಸಮಾಜದ ಅಭ್ಯುದಯಕ್ಕೆ ಶ್ರಮಿಸುತ್ತಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ವಾರದಲ್ಲಿ ಒಮ್ಮೆಯಾದರೂ ತಮ್ಮ ಕುಟುಂಬ ಸದಸ್ಯರೊಂದಿಗೆ ಬೆರೆತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಜತೆಗೆ ಇಂತಹ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತಮ್ಮಲ್ಲಿರುವ ಸಾಮರ್ಥ್ಯವನ್ನು ತೋರ್ಪಡಿಸುವ ಜತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನನೀಡಬೇಕೆಂದರು.

ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಪತ್ರಕರ್ತರ ಕುಟುಂಬದ ಸದಸ್ಯರು ಉತ್ಸುಕತೆಯಿಂದ ಪಾಲ್ಗೊಂಡು ಹಲವು ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನ ಗಿಟ್ಟಿಸಿಕೊಳ್ಳುವಲ್ಲಿ ಸಫಲರಾದರು.

ಸಂಘದ ಜಿಲ್ಲಾ ನಿರ್ದೇಶಕರಾದ ಶಿವನಂಜಯ್ಯ, ಅಣ್ಣೂರು ಸತೀಶ್, ತಾಲೂಕು ಅಧ್ಯಕ್ಷ ಎಂ.ಆರ್.ಚಕ್ರಪಾಣಿ, ಉಪಾಧ್ಯಕ್ಷ ಸಿ.ಹರೀಶ್, ಪ್ರಧಾನ ಕಾರ್ಯದರ್ಶಿ ಎಂ.ಪಿ.ವೆಂಕಟೇಶ್, ಪದಾಧಿಕಾರಿಗಳಾದ ಎಚ್.ಜಿ.ರವಿಕುಮಾರ್, ಎಸ್.ಕೆ.ಸುಂದರ್‌ರಾಜ್, ಮಹದೇವ್, ಎಸ್.ಪುಟ್ಟಸ್ವಾಮಿ, ವಿ.ಎಸ್.ಪ್ರಭು, ಚಾಮನಹಳ್ಳಿ ಮಂಜು, ಪಿ.ನಂದೀಶ್, ಮಧುಕುಮಾರ್, ಎಂ.ಆರ್. ಅಶೋಕ್ ಕುಮಾರ್, ಯು.ಎಸ್.ಶಿವಕುಮಾರ್, ಪ್ರಾಂಶುಪಾಲ ಕಿರಣ್, ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್‌ನಾಯಕ್, ಮಾಧು ಇದ್ದರು.