ಜಿಲ್ಲೆ

ಮಹಾತ್ಮಾ ಗಾಂಧಿ ತತ್ವ, ಸಿದ್ಧಾಂತ ಆದರ್ಶವಾಗಲಿ, ಜಾನಪದ ವಿವಿ ಕುಲಪತಿ ಪ್ರೊ.ಟಿ.ಎಂ ಭಾಸ್ಕರ್ ಆಶಯ

ಶಿಗ್ಗಾಂವಿ: ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾಭಿಮಾನ, ಸ್ವಾವಲಂಬನೆ ನೀತಿ ಮತ್ತು ಮೌಲ್ಯಗಳನ್ನು ಕಾಪಿಟ್ಟುಕೊಳ್ಳುವ ಹಿನ್ನೆಲೆಯಲ್ಲಿ ಚಳವಳಿಗಳು ನಡೆದವು. ಗಾಂಧೀಜಿಯವರ ತತ್ವ, ಸಿದ್ಧಾಂತಗಳು ನಮಗೆಲ್ಲ ಆದರ್ಶವಾಗಲಿ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ ಭಾಸ್ಕರ್ ಹೇಳಿದರು.
ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ರಾಷ್ಟಿ›ೕಯ ಸೇವಾ ಯೋಜನಾ ಕೋಶದಿಂದ ಬುಧವಾರ ಮಲ್ಲಿಗೆ ದಂಡೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮಾ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ ಶಾಸ್ತ್ರಿ ಜಯಂತಿ ಮತ್ತು ಸ್ವಚ್ಛ ಭಾರತ ದಿವಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಲಸಚಿವ ಪ್ರೊ.ಸಿ.ಟಿ. ಗುರುಪ್ರಸಾದ್ ಮಾತನಾಡಿ, ಮಹಾತ್ಮಾ ಗಾಂಧೀಜಿ ಭಾರತದ ಸ್ವಾತಂತ್ರ್ಯ ಯೋಧರು, ದೇಶಕ್ಕೆ ಅಹಿಂಸಾ ಮಾರ್ಗ ಅನುಸರಿಸಿ ಸ್ವಾತಂತ್ರ್ಯ ತಂದುಕೊಟ್ಟರು ಎಂದರು.
ರಾಷ್ಟೀಯ ಸೇವಾ ಯೋಜನೆ ಘಟಕದ ಸಂಯೋಜನಾಧಿಕಾರಿ ಡಾ. ಗಿರೇಗೌಡ ಅರಳಿಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಜಾನಪದ ಕಲಾವಿದ ಶರೀಫ ಮಾಕಪ್ಪನವರ ಪ್ರಾರ್ಥಿಸಿದರು, ಸಹಾಯಕ ಪ್ರಾಧ್ಯಾಪಕರಾದ ಡಾ. ಚಂದ್ರಪ್ಪ ಸೊಬಟಿ ನಿರೂಪಿಸಿ, ವಂದಿಸಿದರು. ನಂತರ ವಿಶ್ವವಿದ್ಯಾಲಯದ ಆವರಣದಲ್ಲಿ ಎನ್​ಎಸ್​ಎಸ್ ಕೋಶದಿಂದ ಶ್ರಮಧಾನದ ಭಾಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.