ಮಸ್ಕಿ: ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು. ಬಿಜೆಪಿ ಕಾರ್ಯಕರ್ತರು ಸೋಮವಾರ ಸಂಜೆ ತೇರಿನ ಮನೆ ಮುಂದಿನಿಂದ ಡಾ.ಬಾಬಸಾಹೇಬ್ ಅಂಬೇಡ್ಕರ್ ಮೂರ್ತಿವರೆಗೆ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ಮಾಡಿದರು.
ಪಟ್ಟಣದ ಹಳೇ ಬಸ್‌ನಿಲ್ದಾಣದ ಬಳಿ ಇರುವ ಡಾ.ಬಾಬಸಾಹೇಬ್ ಅಂಬೇಡ್ಕರ್ ಮೂರ್ತಿ ಬಳಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬಾಂಗ್ಲಾ ದೇಶದಲ್ಲಿರುವ ಹಿಂದುಗಳು ಅಲ್ಪಸಂಖ್ಯಾತರಾಗಿದ್ದು ಅವರಿಗೆ ಆತ್ಮಸ್ಥೈರ್ಯ ತುಂಬುವುದು ನಮ್ಮ ಕರ್ತವ್ಯವಾಗಿದೆ. ಅಲ್ಲಿನ ಸರ್ಕಾರ ಹಿಂದುಗಳ ಮೇಲೆ ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.