ಕೆ.ಆರ್.ನಗರ : ಸಂಘಟನೆಗಳನ್ನು ಮಾಡಿಕೊಳ್ಳುವವರು ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆ ಜಿಲ್ಲಾಧ್ಯಕ್ಷ ಗರುಡುಗಂಬ ಕೆ.ಎಸ್.ಮಂಜುನಾಥ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕೆ.ಆರ್.ನಗರ ಮತ್ತು ಹುಣಸೂರು ತಾಲೂಕುಗಳ ರಾಷ್ಟ್ರೀಯ ಅಹಿಂದ ಸಂಘಟನೆ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆಯ ವತಿಯಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಹಿಂದುಳಿದವರು ಮತ್ತು ನೊಂದವರನ್ನು ಗುರುತಿಸಿ ಅವರಿಗೆ ಸರ್ಕಾರದಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಕೊಡಿಸಲು ಕಾರ್ಯ ಯೋಜನೆ ರೂಪಿಸಿಕೊಂಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಕೋರಿದರು.
ಇದೇ ಸಂದರ್ಭದಲ್ಲಿ ಕೆ.ಆರ್.ನಗರ ತಾಲೂಕು ರಾಷ್ಟ್ರೀಯ ಅಹಿಂದ ಸಂಘಟನೆಯ ಅಧ್ಯಕ್ಷರಾಗಿ ನೇಮಕವಾದ ಕೆ.ಎ.ಮಧು ಮತ್ತು ಹುಣಸೂರು ತಾಲೂಕು ಅಧ್ಯಕ್ಷ ಅಂಜನಿ ಅವರಿಗೆ ನೇಮಕಾತಿ ಪತ್ರ ನೀಡಿ ಅಭಿನಂದಿಸಲಾಯಿತು. ವಕೀಲ ಎಸ್.ಶಿವರಾಜ್, ತಾಲೂಕು ಒಬಿಸಿ ಸಂಘದ ಅಧ್ಯಕ್ಷ ದೆಗ್ಗನಹಳ್ಳಿ ಸಂತೋಷ್, ಮುಖಂಡರಾದ ಅಜಯ್, ಸಂದೇಶ್, ಆದರ್ಶ, ಮಧು, ಪರಶುರಾಮ್ ಇನ್ನಿತರರು ಹಾಜರಿದ್ದರು.