ಬೈಲಹೊಂಗಲದ ಸರ್ಕಾರಿ ಕಾಲೇಜಿನಿಂದ ಏರ್ಪಡಿಸಿದ್ದ ವಾರ್ಷಿಕ ವಿಶೇಷ ಶಿಬಿರಾರ್ಥಿಗಳೊಂದಿಗೆ ಶಾಸಕ ಮಹಾಂತೇಶ ಕೌಜಲಗಿ, ಪ್ರಾಚಾರ್ಯ ಬಿ.ಎಂ.ಕೊಳವಿ, ಅಶೋಕ ವಾಲಿ, ರಾಮನಗೌಡ ಪಾಟೀಲ ಇತರರು ಇದ್ದರು. 
ಜಿಲ್ಲೆ

ಸೇವಾ ಮನೋಭಾವ ರೂಢಿಸಿಕೊಳ್ಳಲಿ

ರಾಘವೇಂದ್ರಗೌಡ ಭೀ ಪಾಟೀಲ್

ಬೈಲಹೊಂಗಲ: ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಸೇವಾ ಮನೋಭಾವ ಮತ್ತು ಸಹಬಾಳ್ವೆಯ ಜೀವನ ಶೈಲಿ ರೂಪಿಸಿಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರವು ಮಹತ್ವದ ಪಾತ್ರ ವಹಿಸುತ್ತದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ತಾಲೂಕಿನ ವಕ್ಕುಂದ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಿಬಿರದಲ್ಲಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಪ್ರತಿಯೊಂದು ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವಂತಾಗಬೇಕು. ಇದರಿಂದ ಪರಿವರ್ತನೆ ಹೊಂದಲು ಅವಕಾಶ ಸಿಗಲಿದೆ. ಶಿಬಿರ ಶ್ರಮದಾನದ ಮಹತ್ವ ತಿಳಿಸುತ್ತಿದೆ. ಶಿಬಿರಾರ್ಥಿಗಳು ಸದುಪಯೋಗ ಪಡೆಯಬೇಕು ಎಂದರು.

ಪ್ರಾಚಾರ್ಯ ಬಿ.ಎಂ.ಕೊಳವಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜು ಅಭಿವದ್ಧಿ ಸಮಿತಿ ಉಪಾಧ್ಯಕ್ಷ ಅಶೋಕ ವಾಲಿ, ಕಲಾವಿದ ಸಿ.ಕೆ.ಮೆಕ್ಕೇದ, ಮುಖಂಡ ರಾಮನಗೌಡ ಪಾಟೀಲ, ಅಶೋಕ ಭದ್ರಶೆಟ್ಟಿ, ಈರಣ್ಣ ಅಂಗಡಿ, ರುದ್ರಪ್ಪ ಕೋಟಗಿ ಇತರರಿದ್ದರು.

ಕಾರ್ಯಕ್ರಮಾಧಿಕಾರಿ ರಮೇಶ ಹುನಗುಂದ ಸ್ವಾಗತಿಸಿದರು. ಉಪನ್ಯಾಸಕ ಬಿ.ಸಿ.ಅಡಕಿ ನಿರೂಪಿಸಿದರು. ಉಪನ್ಯಾಸಕ ಮಹಾಂತೇಶ ಘೋಡಗೇರಿ ವಂದಿಸಿದರು.