ಸಿದ್ದಾಪುರ: ಪ್ರಜಾಪ್ರಭುತ್ವ ವ್ಯವಸ್ಥೆ ಅರ್ಥ ವಾಡಿಕೊಳ್ಳಲು ಶಾಲೆಗಳಲ್ಲಿ ನಡೆಯುವ ಸಂಸತ್ ಪ್ರಕ್ರಿಯೆ ಅತಿ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಶಿಕ್ಷಣದ ಜತೆಗೆ ಸಾವಾಜಿಕ ಕಳಕಳಿಯಿದ್ದಾಗ ಮಕ್ಕಳು ಪ್ರಬುದ್ಧತೆ ಸಾಧಿಸಲು ಸಾಧ್ಯ ಎಂದು ಸುಮುಖ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಹೇಳಿದರು.
ಸುಮುಖ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಸಿದ್ದಾಪುರ ಸರಸ್ವತಿ ವಿದ್ಯಾಲಯಲ್ಲಿ ಶಾಲಾ ವಿದ್ಯಾರ್ಥಿಗಳ ಸಂಸತ್ ಪದಗ್ರಹಣ ಹಾಗೂ ವಿವಿಧ ಕ್ಲಬ್‌ಗಳನ್ನು ಇತ್ತೀಚೆಗೆ ಉದ್ಘಾಟಿಸಿ ವಾತನಾಡಿದರು.
ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಪ್ರೌಢಶಾಲೆ ಮುಖ್ಯಶಿಕ್ಷಕಿ ಶ್ವೇತಾ, ಉಪನ್ಯಾಸಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕ ಸುಮಂತ್ ಸ್ವಾಗತಿಸಿದರು. ವಿದ್ಯಾಶ್ರೀ ವಂದಿಸಿದರು. ಚೈತ್ರಾ ನಿರೂಪಿಸಿದರು.