ಕೋಟ: ವಿದ್ಯಾರ್ಥಿಗಳು ಅಧ್ಯಯನದೊಂದಿಗೆ ಸಾಮಾಜಿಕ ಸೇವೆಯಲ್ಲಿ ಭಾಗವಹಿಸಬೇಕು. ಅವಕಾಶ ಸಿಕ್ಕಾಗ ಇತರರಿಗೆ ಸಹಾಯ ಆಗುವ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಲ್ಲಿ ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಸಾಧ್ಯ ಎಂದು ಕಾರ್ಕಡ ಗೆಳೆಯರ ಬಳಗ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಹೇಳಿದರು.
ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಸಮಾಜ ಸೇವಾ ಸಂ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಶೆಟ್ಟಿ ಮತ್ತು ಸಮಾಜ ಸೇವಾ ಸಂದ ಅಧ್ಯಕ್ಷ ಪವನ್ ಕುವಾರ ಉಪಸ್ಥಿತರಿದ್ದರು. ಸಂದ ಕಾರ್ಯದರ್ಶಿ ಕೃಪಾ ಕಪಾ ವಂದಿಸಿದರು. ಭೂಮಿಕಾ ಟಿ.ಡಿ. ನಿರೂಪಿಸಿದರು. ಸಂ ಸಂಚಾಲಕ ಕೃಷ್ಣ ಕಾರ್ಯಕ್ರಮ ಸಂಯೋಜಿಸಿದ್ದರು.