ಯಲ್ಲಾಪುರ: ರೈತರು ಸಂಪನ್ಮೂಲ ಬಳಸಿಕೊಂಡು ನಮ್ಮಲ್ಲಿರುವ ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿ ಮಾಡುವಲ್ಲಿ ಮಹತ್ವದ ಹೆಜ್ಜೆ ಇಡಬೇಕು ಎಂದು ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.
ತಾಲೂಕಿನ ಹೊನಗದ್ದೆ ವೀರಭದ್ರ ದೇವಸ್ಥಾನದಲ್ಲಿ ಶ್ರೀದೇವಿ ರೈತ ಉತ್ಪಾದಕ ಕಂಪನಿ, ಕೃಷಿ ವಿಶ್ವವಿದ್ಯಾಲಯ ಧಾರವಾಡ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೈತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀದೇವಿ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಸುಬ್ರಹ್ಮಣ್ಯ ಗಾಂವ್ಕರ ಅಧ್ಯಕ್ಷತೆ ವಹಿಸಿದ್ದರು. ಧಾರವಾಡದ ಕೃಷಿ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ ಡಾ.ಬಿ.ಡಿ. ಬಿರಾದಾರ, ಗ್ರಾಪಂ ಅಧ್ಯಕ್ಷ ಭಗೀರಥ ನಾಯ್ಕ, ಪ್ರಮುಖರಾದ ಡಾ. ವೆಂಕಟೇಶ ನಾಯಕ, ಮಾವಿನಮನೆ ಪಂಚಾಯಿತಿ ಅಧ್ಯಕ್ಷ ಸುಬ್ಬಣ್ಣ ಕುಟೇಗಾಳಿ, ಜೈರಾಮ ಹೆಗಡೆ, ಪ್ರಗತಿ ಪರ ಕೃಷಿಕರಾದ ಗುರುಪ್ರಸಾದ ಭಟ್ಟ, ಶ್ರೀಕೃಷ್ಣ ಭಟ್ಟ, ವಿಜ್ಞಾನ ಕೇಂದ್ರದ ರೂಪಾ ಪಾಟೀಲ, ತೋಟಗಾರಿಕೆ ಇಲಾಖೆ ಹಿರಿಯ ನಿರ್ದೇಶಕ ಸತೀಶ ಹೆಗಡೆ ಪತ್ರಕರ್ತ ವಿನುತಾ ಹೆಗಡೆ ಕಾನಗೋಡು, ಇತರರು ಉಪಸ್ಥಿತರಿದ್ದರು.
ಕೃಷಿಯಲ್ಲಿ ರೋಗ ಮತ್ತು ಅಂತರ ಬೆಳೆಗಳ ಕುರಿತು ವಿಚಾರ ಸಂಕಿರಣ ನಡೆಯಿತು. ಕೃಷಿ ತಜ್ಞರು ಮಾಹಿತಿ ನೀಡಿ ಸಂವಾದದಲ್ಲಿ ಪಾಲ್ಗೊಂಡರು. ಪರಿಶಿಷ್ಟ ಪಂಗಡ ರೈತ ಸದಸ್ಯರಿಗೆ ಪರಿಕರ ಹಾಗೂ ರೈತ ಸದಸ್ಯರಿಗೆ ಉಚಿತವಾಗಿ ಕಾಫಿ ಸಸಿಗಳನ್ನು ವಿತರಿಸಲಾಯಿತು.