ಶೃಂಗೇರಿಯಲ್ಲಿ ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು. ಪ್ರದೀಪ್ ಚೋಳರಮನೆ, ಮಂಜುನಾಥ್, ಪುಟ್ಟಪ್ಪ, ಜನಾರ್ದನ್ ಇತರರಿದ್ದರು. 
ಜಿಲ್ಲೆ

ಸಿಎಂ ರಾಜೀನಾಮೆ ನೀಡಲಿ

ಎಸ್.ಎನ್.ರವೀಂದ್ರ

ಶೃಂಗೇರಿ: ಮುಡಾ ನಿವೇಶನ ಹಗರಣದಲ್ಲಿ ಸಿಲುಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನನ್ನು ಗೌರವಿಸಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ತಲಗಾರು ಉಮೇಶ್ ಒತ್ತಾಯಿಸಿದರು.

ಬುಧವಾರ ಕುರುಬಕೇರಿ ವೃತ್ತದಲ್ಲಿ ಬಿಜೆಪಿ ಮಂಡಲದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಬೇರೆ ಪಕ್ಷದವರ ಭ್ರಷ್ಟಾಚಾರದ ಕುರಿತು ಮಾತನಾಡುತ್ತಿದ್ದ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಎಸ್ಸಿ ಮೋರ್ಚಾ ವಕ್ತಾರ ಬಿ.ಶಿವಶಂಕರ್, ಪಪಂ ಅಧ್ಯಕ್ಷ ಎಚ್.ಎಸ್.ವೇಣುಗೋಪಾಲ್, ಸದಸ್ಯ ಹರೀಶ್ ವಿ. ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿ ನೂತನ್‌ಕುಮಾರ್, ವಿದ್ಯಾರಣ್ಯಪುರ ಗ್ರಾಪಂ ಅಧ್ಯಕ್ಷ ಪ್ರವೀಣ್ ಪೂಜಾರಿ, ಸದಸ್ಯ ನಾಗರಾಜ್ ಇದ್ದರು.