ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ತನಿಖೆ ಮಾಡಿಸುವುದು ಸೂಕ್ತ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದಕ್ಕೆ ದಿನಗಣನೆ ಆರಂಭವಾಗಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ತನಿಖೆ ಎದುರಿಸುವಂತೆ ಈಗಾಗಲೇ ಹೇಳಿದ್ದೇನೆ. ಆರೋಪ ಮುಕ್ತವಾಗಿ ಹೊರ ಬಂದರೆ ಎಲ್ಲವೂ ಸರಿಯಾಗಲಿದೆ ಎಂದರು.
ನಟ ದರ್ಶನ್‌ಗೆ ಕಾರಾಗೃಹದಲ್ಲಿ ವಿಶೇಷ ಅತಿಥ್ಯ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಜೈಲಿನಲ್ಲಿ ಯಾರೇ ಆಗಿದ್ದರೂ ಎಲ್ಲರನ್ನೂ ಒಂದೇ ರೀತಿಯಲ್ಲಿ ನೋಡಬೇಕು. ಜೈಲಿನಲ್ಲಿ ಯಾವ ರೀತಿ ಶಿಸ್ತು ಇದೆಯೋ ಅದರಂತೆ ನಡೆಯಬೇಕು. ಜೈಲಿನ ನಿಯಮ ಎಲ್ಲರನ್ನು ಒಂದೇ ರೀತಿ ಕಾಣಬೇಕು ಎಂದರು.