ಚಿಕ್ಕೋಡಿ: ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಗೌರವಿಸುವ ಮೂಲಕ ಪ್ರಗತಿಗೆ ಶ್ರಮಿಸಬೇಕೆಂದು ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ಹೇಳಿದರು.
ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 76ನೆಯ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಶಾಸಕ ಗಣೇಶ ಹುಕ್ಕೇರಿ, ಪುರಸಭೆ ಅಧ್ಯಕ್ಷೆ ವೀಣಾ ಕವಟಗಿಮಠ ಮಾತನಾಡಿದರು.
ಪೊಲೀಸ್, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಉಪವಿಭಾಗಾಧಿಕಾರಿಗಳು ಧ್ವಜ ವಂದನೆ ಸ್ವೀಕರಿಸಿದರು. ಪಿಎಸ್‌ಐ ನೇರ್ಲಿ ಪರೇಡ್ ನೇತೃತ್ವ ವಹಿಸಿದ್ದರು. ಎಂಎಲ್‌ಸಿ ಪ್ರಕಾಶ ಹುಕ್ಕೇರಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಬಾಳಾಸಾಹೇಬ ವಡ್ಡರ, ತಹಸೀಲ್ದಾರ್ ಸಂಜಯ ದೇಸಾಯಿ, ಪುರಸಭೆ ಉಪಾಧ್ಯಕ್ಷ ಇರ್ಫಾನ್ ಬೇಪಾರಿ, ಸದಸ್ಯರಾದ ರಾಮಾ ಮಾನೆ, ಗುಲಾಬ ಬಾಗವಾನ, ಅನಿಲ ಮಾನೆ, ವರ್ಧಮಾನ ಸದಲಗೆ, ಸಬ್ಬೀರ್ ಜಮಾದಾರ ಇತರರಿದ್ದರು.