ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನೂತನ ಸಮೂಹ ಶೀತಲೀಕರಣ ಕೇಂದ್ರವನ್ನು ನಂಜುಂಡಪ್ರಸಾದ್ ಉದ್ಘಾಟಿಸಿದರು. ಕಲ್ಲಳ್ಳಿ ಮಹೇಶ್, ವೀರಭದ್ರಪ್ಪ, ಎಂ.ಪಿ.ಸುನಿಲ್, ರಾಜಕುಮಾರ್, ಶರತ್ ಕುಮಾರ್ ಇದ್ದರು.  
ಜಿಲ್ಲೆ

ಹೈನುಗಾರರು ಗುಣಮಟ್ಟದ ಹಾಲು ಪೂರೈಸಲಿ

ಗುಂಡ್ಲುಪೇಟೆ: ಗುಣಮಟ್ಟದ ಹಾಲು ಉತ್ಪಾದನೆಯಿಂದ ರೈತರು ಹೆಚ್ಚಿನ ಆದಾಯ ಗಳಿಸಲು ಸಾಧ್ಯ ಎಂದು ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್ ಹೇಳಿದರು. ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸಮೂಹ ಶೀತಲೀಕರಣ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಹಾಲು ಒಕ್ಕೂಟವು ಹೈನುಗಾರರ ಹಿತಾಸಕ್ತಿಗೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಗುಣಮಟ್ಟದ ಹಾಲಿಗೆ ಹೆಚ್ಚಿನ ಬೇಡಿಕೆಯಿದೆ. ಆದ್ದರಿಂದ ಉತ್ಪಾದಕರು ಗುಣಮಟ್ಟದ ಹಾಲು ಉತಾದನೆ ಮಾಡುವ ಮೂಲಕ ಲಾಭ ಗಳಿಸಬಹುದು ಎಂದು ಹೇಳಿದರು. ಸಂಘದ ಅಧ್ಯಕ್ಷ ಕಲ್ಲಳ್ಳಿ ಮಹೇಶ್, ಉಪಾಧ್ಯಕ್ಷ ವೀರಭದ್ರಪ್ಪ, ಚಾಮುಲ್ ನಿರ್ದೇಶಕ ಎಂ.ಪಿ.ಸುನಿಲ್, ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್, ವ್ಯವಸ್ಥಾಪಕ ಶರತ್ ಕುಮಾರ್ ಸೇರಿದಂತೆ ಹಲವರು ಇದ್ದರು.