ಮೈಸೂರು: ರೈತರು ಬೆಳೆಯುವ ಬೆಳೆಗಳಿಗೆ ವೈಜ್ಞಾನಿಕವಾದ ಬೆಲೆ ನೀಡುವ ಕೆಲಸ ಮೊದಲಾಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಆಗ್ರಹಿಸಿದರು.
ಮೆಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸಂವೃದ್ಧಿ ಸೇವಾ ಟ್ರಸ್ಟ್, ಮಹಿಳಾ ವಿಶೇಷ ಕನ್ನಡ ಮಾಸಿಕ ಸಹಯೋಗದಲ್ಲಿ ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ರೈತ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಬಗ್ಗೆ ಸುಮ್ಮನೆ ಮಾತನಾಡಿದರೆ ವ್ಯರ್ಥ. ಬದಲಿಗೆ ಅವರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಬ್ರಿಟೀಷರ ಕಾಲದಿಂದಲೂ ಇರುವ ಕಾವೇರಿ ಸಮಸ್ಯೆ ಪರಿಹಾರಕ್ಕೆ ಯುವಕರನ್ನು ಸೇರಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವ ಬಗ್ಗೆ ಚಿಂತಿಸಬೇಕಾಗಿದೆ ಎಂದು ಹೇಳಿದರು.ಕರ್ನಾಟಕ ಕಾವಲುಪಡೆ ಅಧ್ಯಕ್ಷ ಎಂ.ಮೋಹನಕುಮಾರ್ ಗೌಡ ಮಾತನಾಡಿ, ರೈತರನ್ನು ನೆನೆಯುವುದು ಪ್ರತಿಯೊಬ್ಬರ ಕರ್ತವ್ಯ. ರೈತರು ಸಮೃದ್ಧವಾಗಿ ಬದುಕುವಂತೆ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದರು.