ಲಿಂಗಸುಗೂರು: ಸಿರಿಧಾನ್ಯಗಳನ್ನು ಕಡಿಮೆ ಖರ್ಚಿನಲ್ಲಿ ಬೆಳೆಯಬಹುದಾಗಿದ್ದು ರೈತರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೃಷಿ ವಿಸ್ತರಣಾ ಕೇಂದ್ರದ ಗೃಹ ವಿಜ್ಞಾನ ತಜ್ಞೆ ಡಾ.ವಾಣಿಶ್ರೀ ಹೇಳಿದರು.
ಪಟ್ಟಣದ ಕೃಷಿ ವಿಸ್ತರಣಾ ಕೇಂದ್ರದಲ್ಲಿ ಮಂಗಳವಾರ ಸಿರಿಧಾನ್ಯಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಸಿಗೆ ನೀರುಣಿಸಿ ಮಾತನಾಡಿದರು. ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯಿಂದ ಆರ್ಥಿಕ ಲಾಭ ಹೊಂದಬಹುದು ಎಂದರು.
ವಿಷಯ ತಜ್ಞೆ ರೇಣುಕಾ ಬೀರಾದಾರ್ ಮಾತನಾಡಿ, ಸಿರಿಧಾನ್ಯಗಳೆಂದರೆ ಪೌಷ್ಟಿಕಾಂಶಗಳೆಂಬ ಸಂಪತ್ತು ತುಂಬಿರುವ ಕಾಳುಗಳು. ಸಿರಿಧಾನ್ಯಗಳ ಕೃಷಿಯು ಕೇವಲ ಸಾಂಪ್ರದಾಯಿಕ ಕೃಷಿಯಲ್ಲ. ಇದೊಂದು ವಿಶೇಷ ಮತ್ತು ವಿಶಿಷ್ಟ ಕೃಷಿಯಾಗಿದೆ ಎಂದರು.