ಮುಂಡರಗಿ: ಗ್ಯಾರಂಟಿ ಯೋಜನೆಗಳು ಶೇ.100 ರಷ್ಟು ಪ್ರಗತಿ ಸಾಧಿಸಬೇಕು. ಪ್ರತಿಯೊಬ್ಬರಿಗೂ ಯೋಜನೆ ತಲುಪಬೇಕು ಎಂದು ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ತಾಲೂಕಿನ ಡಂಬಳ ಗ್ರಾಮದ ಜಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಜನಸ್ಪಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಗನವಾಡಿ, ಆಶಾ ಕಾರ್ಯಕರ್ತೆಯರು, ತಾ.ಪಂ.ಇಒಗಳು, ಪಿಡಿಒಗಳು ಗ್ರಾಮ ಆಡಳಿತ ಅಧಿಕಾರಿಗಳು ಸೇರಿ ಸಂಬಂಧಿಸಿದ ಇಲಾಖೆಗಳ ಜತೆಗೂಡಿ ಮನೆ ಮನೆ ಸಮೀಕ್ಷೆ ಮಾಡಿ ಗ್ಯಾರಂಟಿ ಯೋಜನೆ ಪ್ರಗತಿ ಸಾಧಿಸಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಜಿ. ಪಾಟೀಲ, ಜನರ ಜೀವನ ಮಟ್ಟ ಸುಧಾರಿಸುವಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮುಖ್ಯ ಪಾತ್ರ ವಹಿಸಿವೆ ಎಂದರು.
ಗದಗ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಹೇಮಂತಗೌಡ ಪಾಟೀಲ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಡಿ.ಡಿ. ಮೊರನಾಳ ಮಾತನಾಡಿದರು. ಇಒ ವಿಶ್ವನಾಥ ಹೊಸಮನಿ, ಹುಸೇನಸಾಬ ಕಾತರಕಿ, ಸಿಡಿಪಿಒ ಮಹಾದೇವ ಇರಸನಾಳ, ಗ್ರಾಪಂ ಅಧ್ಯಕ್ಷೆ ನಾಗಮ್ಮ ಬಳ್ಳಾರಿ, ರಾಮಣ್ಣ ಮೇಗಲಮನಿ, ನಾಗರಾಜ ಸಜ್ಜನರ, ವಿಶ್ವನಾಥ ಪಾಟೀಲ, ಭುವನೇಶ್ವರಿ ಕಲ್ಲಕುಟಿಗರ, ಗೀತಾ ನಾಡಗೌಡರ, ಕಾಶಪ್ಪ ಹೊನ್ನೂರ, ಜಿ.ಎಸ್.ಕೊರ್ಲಹಳ್ಳಿ, ಬಸವರಡ್ಡಿ ಬಂಡಿಹಾಳ, ಮಹೇಶ ಗಡಗಿ, ಬಾಬು ಮೂಲಿಮನಿ ಇತರರು ಇದ್ದರು.