ಜಿಲ್ಲೆ

ಸಮಾಜದ ಅಂಚಿನಲ್ಲಿರುವ ವರ್ಗಗಳಿಗೂ ಸಿಗಲಿ ಪ್ರಯೋಜನ

Avinash R

ಕಾಸರಗೋಡು: ವಿಕೇಂದ್ರೀಕೃತ ಯೋಜನೆಯ ಭಾಗವಾಗಿ, ಅಭಿವೃದ್ಧಿಯ ಪ್ರಯೋಜನಗಳು ಸಮಾಜದ ಅಂಚಿನಲ್ಲಿರುವ ವರ್ಗಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ ಎಂದು ಉದ್ಯೋಗ ಮತ್ತು ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದರು.

ಕಳನಾಡ್ ಕೆ.ಎಚ್.ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪಂಚಾಯತಿ ಅಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಸಿ.ಎಚ್. ಕುಂಞಂಬು ಅಧ್ಯಕ್ಷತೆ ವಹಿಸಿ ಶಾಲೆಗಳಿಗೆ ಲ್ಯಾಪ್‌ಟಾಪ್ ವಿತರಿಸಿದರು.

ಶಾಸಕ ಇ. ಚಂದ್ರಶೇಖರನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಸ್ ಪಾದೂರು, ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾ ಕೃಷ್ಣನ್, ಕಾಸರಗೋಡು ಜಿಲ್ಲಾ ಪಂಚಾಯಿತಿ ಲೋಕೋಪಯೋಗಿ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ. ಶಕುಂತಲಾ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಅಡ್ವ. ಎಸ್.ಎನ್.ಸರಿತಾ, ಕಲ್ಯಾಣ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಮನು, ಪ್ರಮುಖರಾದ ಕೆ. ಬಾಲಕೃಷ್ಣನ್, ವಿ.ವಿ. ರಮೇಶನ್, ಟಿ. ರಾಜೇಶ್, ಸಿ. ರಾಮಚಂದ್ರನ್, ಟಿ. ವಿ. ಮಧುಸೂದನನ್ ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಸ್ವಾಗತಿಸಿ, ಜಿಲ್ಲಾ ಪಂಚಾಯತಿ ಕಾರ್ಯದರ್ಶಿ ಎಸ್. ಶ್ಯಾಮಲಕ್ಷ್ಮೀ ವಂದಿಸಿದರು.