ಮೈಸೂರು: ನೀಟ್ ಹಗರಣದ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಿ ಹಗರಣದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಎಐಡಿಎಸ್‌ಓ ವತಿಯಿಂದ ಮಾನಸ ಗಂಗೋತ್ರಿಯ ದೊಡ್ಡ ಗಡಿಯಾರದ ಬಳಿ ಪ್ರತಿಭಟನೆ ನಡೆಸಲಾಯಿತು.
ನೀಟ್-2024ರ ಫಲಿತಾಂಶದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರುವುದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರದ ನಿರ್ಲಕ್ಷೃ ಧೋರಣೆಯಿಂದ ಯುಜಿಸಿ ನೆಟ್ ಪರೀಕ್ಷೆಯನ್ನು ಪರೀಕ್ಷೆ ಮುಗಿದ 24 ಗಂಟೆಗಳ ನಂತರ ರದ್ದುಗೊಳಿಸಲಾಗಿದೆ. ಸಿಎಸ್‌ಐಆರ್ ನೆಟ್ ಪರೀಕ್ಷೆಯನ್ನೂ ಮುಂದೂಡಲಾಗಿದೆ. ಈ ಎಲ್ಲ ಘಟನೆಗಳು ನೀಟ್ ಹಗರಣದ ಹಿನ್ನೆಲೆಯಲ್ಲಿ ಸಂಭವಿಸಿದ್ದು, ದೇಶ ಶಿಕ್ಷಣ ಕ್ಷೇತ್ರದಲ್ಲಿನ ಅತಿದೊಡ್ಡ ಹಗರಣ ಎಂದು ಕಿಡಿಕಾರಿದರು.