ಕೂಡ್ಲಿಗಿ: ಕರ್ನಾಟಕ ರಾಜ್ಯೋತ್ಸವವನ್ನು ಹಬ್ಬದಂತೆ ಆಚರಿಸಲು ಮುಂದಾಗಬೇಕು ಎಂದು ತಹಸೀಲ್ದಾರ್ ವಿ.ಕೆ.ನೇತ್ರಾವತಿ ಹೇಳಿದರು.
ಇದನ್ನೂ ಓದಿ:ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಆಡಳಿತದಿಂದ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ರಾಜ್ಯೋತ್ಸವ ಕಾರ್ಯಕ್ರಮ ನಾಡಿನ ವೈಶಿಷ್ಟೃ ಬಿಂಬಿಸುವಂತೆ ಆಯೋಜಿಸಬೇಕು. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಬೇಕೆಂದರು.
ಪ್ರೌಢಶಾಲೆ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಮತ್ತು ರಸಪ್ರಶ್ನೆ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಬೇಕು. ನಾಡಿಗಾಗಿ ಸೇವೆ ಸಲ್ಲಿಸಿದ ಐದು ಜನ ಸಾಧಕರನ್ನು ಸನ್ಮಾನಿಸಬೇಕು. ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಕನ್ನಡ ನಾಡಿನ ಪ್ರಮುಖ ನಾಯಕರ ಛದ್ಮವೇಷ ಧರಿಸಿ ಮೆರವಣಿಗೆ ನಡೆಸಬೇಕು. ಮೆರವಣಿಗೆಯಲ್ಲಿ ಭಾಗವಹಿಸಿದ ಶಾಲೆಗಳಿಗೆ ಪ್ರಥಮ, ದ್ವೀತಿಯ ಹಾಗೂ ತೃತೀಯ ಬಹುಮಾನ ಹಾಗೂ ಎಲ್ಲರಿಗೂ ಪ್ರಮಾಣಪತ್ರ ನೀಡಬೇಕು. ತಾಲೂಕಿನ ಎಲ್ಲ ಸರ್ಕಾರಿ ಕಚೇರಿ, ಗ್ರಾಪಂ ಹಾಗೂ ಶಾಲಾ-ಕಾಲೇಜುಗಳಲ್ಲಿ ರಾಜ್ಯೋತ್ಸವ ಕಡ್ಡಾಯವಾಗಿ ಆಚರಿಸಬೇಕು ಎಂದು ತಹಸೀಲ್ದಾರ್ ತಾಕೀತು ಮಾಡಿದರು.
ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ತಾಪಂ ಇಒ ನರಸಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್, ಕರವೇ ತಾಲೂಕು ಅಧ್ಯಕ್ಷ ಕಾಟೇರ ಹಾಲೇಶ್, ಕಸಾಪ ತಾಲೂಕು ಅಧ್ಯಕ್ಷ ವೀರೇಶ್ ಅಂಗಡಿ, ಗಾಂಧಿ ಸ್ಮಾರಕ ಸಮಿತಿಯ ಡಿ.ನಾಗರಾಜ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಸುನೀಲ್ ಗೌಡ, ಅಖಿಲ ಭಾರತ ವಾಲ್ಮೀಕಿ ಮಹಾಸಭಾ ತಾಲೂಕು ಅಧ್ಯಕ್ಷ ಎಸ್.ಸುರೇಶ್ ಇತರರಿದ್ದರು.