ವಿಜಯಪುರ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲ ರೂಢಿಸಿಕೊಂಡು ಸುಂದರ ಜೀವನ ರೂಪಿಸಿಕೊಳ್ಳಬೇಕೆಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಸಲಹೆ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಬಿ.ವಿ. ದರಬಾರ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಸಭಾಂಗಣದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ನಿರಂತರ ಕಲಿಕೆಯ ಮೂಲಕ ಉತ್ತಮ ಗುರಿ ಇಟ್ಟುಕೊಂಡು ಉನ್ನತ ಸ್ಥಾನ ಪಡೆದು ಸಮಾಜಕ್ಕೆ ತಮ್ಮ ಕೊಡುಗೆ ಸಲ್ಲಿಸಬೇಕೆಂದು ತಿಳಿಸಿದರು.
ವಿಜಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ ಪರಶುರಾಮ ಭಾಸಗಿ ಮಾತನಾಡಿ, ಮಾಧ್ಯಮ ಎಂದರೆ ಮಾಹಿತಿ, ಮನರಂಜನೆ ಹಾಗೂ ಶಿಕ್ಷಣದ ಕುರಿತ ಮಾಹಿತಿಯನ್ನು ಕನ್ನಡಿಯ ರೀತಿಯಲ್ಲಿ ಜನರಿಗೆ ಮುಟ್ಟಿಸುವ ಕೌಶಲ. ಸತತ ಅಧ್ಯಯನ, ಪ್ರತಿ ವಿಷಯದ ಕುರಿತು ಅರಿತುಕೊಳ್ಳುವ ಹಂಬಲ, ಇಚ್ಛಾಶಕ್ತಿ ಮೂಲಕ ಈ ಎಲ್ಲ ಕೌಶಲ ಬೆಳೆಸಿಕೊಂಡರೆ ಭವಿಷ್ಯದಲ್ಲಿ ವಿಫುಲ ಅವಕಾಶಗಳು ಸಿಗಲಿವೆ ಎಂದರು.
ಸ್ವಾತಂತ್ರ ಸಂಗ್ರಾಮದಲ್ಲಿ ಮಾಧ್ಯಮ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದೆ. ಮಾಧ್ಯಮ ೇತ್ರ ಎಲ್ಲ ರಂಗಗಳಲ್ಲೂ ಇದೆ.
ರವಣಿಗೆಯಲ್ಲಿ ಚಿಂತನೆಗಳ ಮೆರವಣಿಯಾಗಬೇಕು. ಯಾವುದೇ ಸಾಮಾಜಿಕ ಸುಧಾರಣೆಗೆ ಮಾಧ್ಯಮದ ಪಾತ್ರ ಅತ್ಯಂತ ಮಹತ್ವ ವಹಿಸಲಿದೆ.
ತ್ರಕರ್ತರಾಗ ಬಯಸುವರು ಮಾತಿನ ಶೈಲಿ ಕರಗತ ಮಾಡಿಕೊಳ್ಳಬೇಕು, ನಿರಂತರ ಕಲಿಯುವಿಕೆ ರೂಢಿಸಿಕೊಳ್ಳಬೇಕು. ಮಾಧ್ಯಮ ೇತ್ರದಲ್ಲಿ ಉತ್ತಮ ಅವಕಾಶಗಳಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಬಿ.ವಿ. ದರಬಾರ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಚ್. ಮಣ್ಣೂರ ಮಾತನಾಡಿ, ವಿದ್ಯಾರ್ಥಿಗಳು ಪತ್ರಿಕೆ ಓದುವ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಶಿಕ್ಷಕಿ ರಶ್ಮಿ ಪಾಟೀಲ ಮತ್ತಿತರರಿದ್ದರು.