ಬೀಳಗಿ ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದ ಕನ್ನಡ-ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಎಲ್.ಬಿ.ಕುರ್ತಕೋಟಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ರಾಮನಗೌಡ ಜಕ್ಕನಗೌಡ, ಶಂಕರಗೌಡ ಪಾಟೀಲ, ಡಿ.ಎಸ್.ಕುಂಠೆ ಇತರರಿದ್ದರು. 
ಜಿಲ್ಲೆ

ವಿದ್ಯಾರ್ಥಿಗಳು ಆರೋಗ್ಯ ಕಾಪಾಡಿಕೊಳ್ಳಲಿ

Vijayapura - Desk - Gurappa Lokuri

ಬೀಳಗಿ: ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯೊಂದಿಗೆ ಕ್ರೀಡೆ, ಸಾಂಸ್ಕೃತಿಕ ಪ್ರತಿಭಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ ಎಂದು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಎಲ್.ಬಿ.ಕುರ್ತಕೋಟಿ ಹೇಳಿದರು.

ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಧಿಕಾರ ಸ್ವೀಕಾರ ಹಾಗೂ ಕ್ರೀಡಾ, ಸಾಂಸ್ಕೃತಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ದೇಶದ ಪ್ರಜೆಗಳಾಗಿ ದೇಶಾಭಿಮಾನ ಮೈಗೂಡಿಸಿಕೊಳ್ಳಬೇಕು. ಶಿಕ್ಷಣ ರಂಗದ ಇತರ ಕ್ರಿಯಾತ್ಮಕ ಚಟುವಟಿಕೆಯಲ್ಲಿ ಭಾಗಿಯಾಗಿ ಸದೃಢ ಮತ್ತು ಆರೋಗ್ಯವಂತರಾಗಿರಬೇಕು. ಶಿಕ್ಷಣ ನೀಡುವ ಗುರು ಹಾಗೂ ತಂದೆ-ತಾಯಿ, ಹಿರಿಯರನ್ನು ಗೌರವದಿಂದ ಕಾಣಬೇಕು ಎಂದರು.

ಜೆಮ್ ಶುಗರ್ಸ್ ನಿರ್ದೇಶಕ ರಾಮನಗೌಡ ಜಕ್ಕನಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣ ಕ್ಷೇತ್ರದ ಉನ್ನತಿಗಾಗಿ ಪೋಷಕರು ಹಾಗೂ ಶಿಕ್ಷಕರು ಸಹಕರಿಸಬೇಕಾಗಿದೆ. ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆದು ಉನ್ನತ ಹುದ್ದೆಯಲ್ಲಿ ನೌಕರಿಯಲ್ಲಿದ್ದಾರೆ. ಈ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಪಾಟೀಲರು ಸಂಸ್ಥೆ ಮತ್ತು ವಿದ್ಯಾರ್ಥಿಗಳ ಬೆಳೆವಣಿಗೆಗೆ ಸಾಕಷ್ಟು ಶ್ರಮ ಪಡುತ್ತಿದ್ದಾರೆ. ಬೀಳಗಿಯಂಥ ಒಂದು ಸಣ್ಣ ತಾಲೂಕಿನಲ್ಲಿ ಎಲ್‌ಕೆಜಿಯಿಂದ ಪಿಜಿವರೆಗೆ ಶಿಕ್ಷಣ ದೊರೆಯುವಂತೆ ಮಾಡಿದ ಅವರ ಕಾರ್ಯ ಶ್ಲಾಘನೀಯ ಎಂದರು.

ವೈ.ಎಂ.ಬೋರ್ಜಿ, ಡಿ.ಪಿ.ಅಮಲಝರಿ, ಸಂತೋಷ ಜಂಬಗಿ, ಬೋಜು ದೇವೂರ, ಸುಜಾತಾ ಹಿರೇನಿಂಗಪ್ಪನವರ, ಲತಾ ಪಾಟೀಲ, ಆಡಳಿತಾಧಿಕಾರಿ ಶಂಕರಗೌಡ ಪಾಟೀಲ, ಶೈಕ್ಷಣಿಕ ನಿರ್ದೇಶಕ ಡಿ.ಎಸ್.ಕುಂಠೆ, ಮುಖ್ಯಶಿಕ್ಷಕ ಆರ್.ಎಸ್.ನಂದವಾಡಗಿ, ಎಸ್.ಎಂ.ಹಳ್ಳೂರ ಇತರರಿದ್ದರು.