ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಗ್ಯಾರಂಟಿ ಸಭೆಯಲ್ಲಿ ಸತೀಶ ಜಾರಕಿಹೊಳಿ ಮಾತನಾಡಿದರು. ಆಸೀಫ್​ ಸೇಠ್​, ಬಾಬಸಾಹೇಬ್​ ಪಾಟೀಲ, ರಾಹುಲ ಶಿಂಧೆ ಇತರರಿದ್ದರು. 
ಜಿಲ್ಲೆ

ವಿದ್ಯಾರ್ಥಿಗಳು ಯೋಜನೆ ಸದ್ಬಳಕೆ ಮಾಡಿಕೊಳ್ಳಲಿ

ವಿಠ್ಠಲ ಹಣಮಂತ ಬಾಳೇಕುಂದ್ರಿ

ಬೆಳಗಾವಿ: ಯುವನಿಧಿ ಯೋಜನೆಯಡಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಪುಸ್ತಕ ಖರೀದಿಸಲು ಎಲ್ಲ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿ, ಯುವನಿಧಿ ಯೋಜನೆಯನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಅಧ್ಯಯನಕ್ಕೆ ಮಾತ್ರ ಗ್ಯಾರಂಟಿ ಹಣ ಬಳಸಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ, ಗೃಹಲಕ್ಷಿ$್ಮ ಹಾಗೂ ಯುವ ನಿಧಿ ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸುವ ನಿಟ್ಟಿನಲ್ಲಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ಕೆಲವು ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಸರ್ಕಾರಿ ಬಸ್​ ಸಂಚಾರ ಇಲ್ಲ. ಅಂತಹ ಗ್ರಾಮಗಳಿಗೆ ಬಸ್​ ವ್ಯವಸ್ಥೆ ಕಲ್ಪಿಸಬೇಕು. ಕೆಲವೆಡೆ ಪಡಿತರ ಪಡೆಯಲು ಜನರು ಅಕ್ಕಪಕ್ಕದ ಗ್ರಾಮದಿಂದ ಬರಬೇಕಿದೆ. ಆಯಾ ಗ್ರಾಮಗಳಿಗೆ ಪಡಿತರ ಸರಬರಾಜು ಮಾಡುವ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಸೂಚಿಸಿದರು.

ಶಾಸಕರಾದ ಆಸೀಫ್​ ಸೇಠ್​, ಬಾಬಾಸಾಹೇಬ್​ ಪಾಟೀಲ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯ ವಿನಯ ನಾವಲಗಟ್ಟಿ, ಜಿಪಂ ಸಿಇಒ ರಾಹುಲ್​ ಶಿಂಧೆ, ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಇತರರಿದ್ದರು.