ಮಾನ್ವಿಯ ಬಾಲಕರ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 77ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಂಪಯ್ಯ ನಾಯಕ ಮಾತನಾಡಿದರು. ತಹಸೀಲ್ದಾರ್ ರಾಜು ಪಿರಂಗಿ, ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್, ಪಿಐ ವೀರಭದ್ರಯ್ಯ ಹಿರೇಮಠ, ಟಿಎಪಿಎಂಸಿ ಅಧ್ಯಕ್ಷ ತಿಮ್ಮಾರಡ್ಡಿ ಭೋಗಾವತಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಸಲೀಂ ಪಾಷಾ ಇದ್ದರು. 
ಜಿಲ್ಲೆ

ಮಕ್ಕಳಲ್ಲಿ ಶಿಕ್ಷಕರು ಆತ್ಮವಿಶ್ವಾಸ ಮೂಡಿಸಲಿ

ಮಾನ್ವಿ: ಕ್ಷೇತ್ರದ ಸರ್ವತೋಮುಖ ಬೆಳವಣಿಗೆಗೆ ನಿರಂತರ ಶ್ರಮಿಸಲಾಗುವುದು ಎಂದು ಶಾಸಕ ಹಂಪಯ್ಯ ನಾಯಕ ಹೇಳಿದರು.


ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 77ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ಶಿಕ್ಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು. ದೇಶದ ಸ್ವಾತಂತ್ರೃಕ್ಕಾಗಿ ಗಾಂಧೀಜಿ, ಅಂಬೇಡ್ಕರ್ ಸೇರಿ ಹಲವು ಮಹನೀಯರು ಶ್ರಮಿಸಿದ್ದಾರೆ. ಅವರ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.


ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ತಹಸೀಲ್ದಾರ್ ರಾಜು ಪಿರಂಗಿ, ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್, ಪಿಐ ವೀರಭದ್ರಯ್ಯ ಹಿರೇಮಠ, ಟಿಎಪಿಎಂಸಿ ಅಧ್ಯಕ್ಷ ತಿಮ್ಮಾರಡ್ಡಿ ಭೋಗಾವತಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಸಲೀಂ ಪಾಷಾ, ಮುಖ್ಯಾಧಿಕಾರಿ ಗಂಗಾಧರ, ಬಿಇಒ ಚಂದ್ರಶೇಖರ ದೊಡ್ಡಮನಿ ಇದ್ದರು.