ಜಿಲ್ಲೆ

ಕಾರ್ಯಕರ್ತರು ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡಲಿ

ರವಿ ಎಸ್. ಬಳೂಟಗಿ

ಗಜೇಂದ್ರಗಡ: ಬಿಜೆಪಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಂಘಟನಾ ಪರ್ವ ಅವಶ್ಯವಾಗಿದ್ದು, ಪ್ರತಿ ಬೂತ್‌ನಲ್ಲೂ ಕಾರ್ಯಕರ್ತರು ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಬಿಜೆಪಿ ರೋಣ ಮಂಡಲ ವತಿಯಿಂದ ಜರುಗಿದ ಸಂಘಟನಾ ಪರ್ವ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದು, ಪಕ್ಷ ಬಲವರ್ಧನೆಗಾಗಿ ಕೆಲವು ಬೂತ್‌ಗಳಲ್ಲಿ ಪದಾಧಿಕಾರಿಗಳನ್ನು ಬದಲಾವಣೆ ಮಾಡಬೇಕಾಗಿದೆ. ಹೀಗಾಗಿ ಈ ಸಂಘಟನಾ ಪರ್ವ ಸಭೆ ಕರೆದಿದ್ದು ಎಲ್ಲರೂ ಉತ್ಸಾಹದಿಂದ ಕೇಂದ್ರ ಸರ್ಕಾರದ ಜಾರಿಗೊಳಿಸಿರುವ ಯೋಜನೆಗಳನ್ನು ಜನರಿಗೆ ಮುಟ್ಟಿಸಬೇಕಾಗಿದೆ. ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಎಂದು ಭವಿಷ್ಯ ನುಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಕೆ. ಚವ್ಹಾಣ, ಬಿಜೆಪಿ ರೋಣ ಮಂಡಲ ಅಧ್ಯಕ್ಷ ಮುತ್ತು ಕಡಗದ ಮಾತನಾಡಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಬಿಜೆಪಿ ನಗರ ಘಟಕದ ಆಧ್ಯಕ್ಷ ರಾಜೇಂದ್ರ ಘೋರ್ಪಡೆ, ಹನಮಂತಪ್ಪ ಹಟ್ಟಿಮನಿ, ಉಮೇಶ ಮಲ್ಲಾಪುರ, ಅಶೋಕ ನವಲಗುಂದ, ಬಾಳಾಜಿರಾವ್ ಭೋಸ್ಲೆ, ಶರಣಪ್ಪ ಪ್ಯಾಟಿ, ಮಲ್ಲು ಮಾದರ ಇತರರಿದ್ದರು.