ಮೂಡಲಗಿ: ದಲಿತರು ಬಾಬಾಸಾಹೇಬರ ಜಯಂತಿ ಆಚರಿಸುವುದರ ಜತೆಗೆ ಅವರ ಕೊಡುಗೆ, ತತ್ತ್ವ ಹಾಗೂ ಸಿದ್ಧಾಂತಗಳನ್ನು ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ಪ್ರೊ.ವೈ.ಎಸ್.ಚಲವಾದಿ ಹೇಳಿದರು.
ಪಟ್ಟಣದ ಶ್ರೀ ಶ್ರೀಪಾದಭೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ತಾಲೂಕಾಡಳಿತ, ತಾಪಂ, ಪುರಸಭೆ, ಸ್ಥಳಿಯ ಸಂಸ್ಥೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಹಸೀಲ್ದಾರ್ ಶಿವಾನಂದ ಬಬಲಿ, ಬಿಇಒ ಅಜಿತ್ ಮನ್ನಿಕೇರಿ ಮಾತನಾಡಿ, ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಬದುಕು ಎಲ್ಲರಿಗೂ ದಾರಿದೀಪವಾಗಿದೆ ಎಂದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಸಂಚರಿಸಿತು. ತಾಪಂ ಎ್.ಜಿ.ಚಿನ್ನನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಮುಖ್ಯಾಧಿಕಾರಿ ತುಕಾರಾಮ ಮಾದರ, ಹೆಸ್ಕಾಂ ಅಧಿಕಾರಿ ಎಂ.ಎಸ್. ನಾಗನ್ನವರ, ಸಿಡಿಪಿಒ ಯಲ್ಲಪ್ಪ ಗದಾಡಿ, ಎಂ.ಎಸ್.ಪಾಟೀಲ, ಪ್ರಾಚಾರ್ಯ ಮಹೇಶ ಕಂಬಾರ, ಯಲ್ಲಪ್ಪ ಭಂಜತ್ರಿ ಇತರರಿದ್ದರು.