ಗುಂಡ್ಲುಪೇಟೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜೆ.ಜೆ.ಶಿವಕುಮಾರ್ ಸಸಿಗೆ ನೀರೆರೆಯುವ ಮೂಲಕ ವಿಶ್ವಪರಿಸದ ದಿನಾಚರಣೆಗೆ ಚಾಲನೆ ನೀಡಿದರು. ಬಸವರಾಜ್ ತಳವಾರ್ ಬಿ.ಎಂ.ಮಲ್ಲೇಶ್, , ಕಾಂತಮ್ಮ, ವೆಂಕಟೇಶ್ ಇದ್ದರು 
ಜಿಲ್ಲೆ

ಜನರಲ್ಲಿ ಹೆಚ್ಚಿನ ಅರಿವು ಮೂಡಲಿ

ಗುಂಡ್ಲುಪೇಟೆ: ವಿಶ್ವ ಪರಿಸರ ದಿನವು ನಮ್ಮ ಪರಿಸರವನ್ನು ಸಂರಕ್ಷಿಸಲು ಜಾಗೃತಿ ಮೂಡಿಸುವ ಮತ್ತು ಪ್ರೋತ್ಸಾಹಿಸುವ ಕ್ರಿಯೆಯ ಗುರಿಯನ್ನು ಹೊಂದಿರುವ ಜಾಗತಿಕ ಕಾರ್ಯಕ್ರಮವಾಗಿದ್ದು, ಈ ಬಗ್ಗೆ ಸಾರ್ವಜನಿರಲ್ಲಿ ಇನ್ನೂ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ತಳವಾರ್ ಹೇಳಿದರು.

ವಿಶ್ವಾ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆಯಿಂದ ಬುಧವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹವಾಮಾನ ಬದಲಾವಣೆ, ಮಾಲಿನ್ಯ, ಅರಣ್ಯನಾಶ ಮತ್ತು ಜೀವವೈವಿಧ್ಯದ ನಷ್ಟದಂತಹ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಪ್ರತಿ ವರ್ಷ ಜೂನ್ 5 ರಂದು ನಡೆಸಲಾಗುತ್ತಿದೆ ಎಂದರು.

ಬಫರ್ ವಲಯಾರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್ ಮಾತನಾಡಿ, ಪ್ರಕೃತಿ ಸಕಲ ಜೀವರಾಶಿಯನ್ನು ಸಲಹುವ ತಾಯಿಯಾಗಿದ್ದು, ನಮ್ಮ ಬದುಕಿಗೆ ಅವಶ್ಯವಿರುವ ಎಲ್ಲವನ್ನೂ ನೀಡುತ್ತಿದೆ. ಪರಿಸರ ಸಂರಕ್ಷಣೆಯಿಂದ ಮಾತ್ರ ಜೀವಸಂಕುಲದ ಉಳಿವು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಕನಿಷ್ಠ ಒಂದಾದರೂ ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ಹಾಗೂ ಜೆಎಂಎಂಸಿ ನ್ಯಾಯಾಧೀಶರಾರ ಜೆ.ಜೆ. ಶಿವಕುಮಾರ್, ಹೆಚ್ಚುವರಿ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶೆ ಕಾಂತಮ್ಮ ವಕೀಲ ಸಂಘದ ಅಧ್ಯಕ್ಷ ಟಿ.ಎಸ್. ವೆಂಕಟೇಶ ಹಾಗೂ ಸಿಬ್ಬಂದಿ ಇದ್ದರು.