ಜಿಲ್ಲೆ

ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಲಿ

ಸಿದ್ದಾಪುರ: ವಿದ್ಯಾರ್ಥಿಗಳು ಮೊದಲು ಶಿಸ್ತನ್ನು ಪಾಲಿಸಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ಸು ಹೊಂದಲು ಸಾಧ್ಯ. ಶಿರಸಿ ಹಾಗೂ ಸಿದ್ದಾಪುರ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬೇಡಿಕೆಯ ಕೋರ್ಸ್‌ಗಳನ್ನು ಮಂಜೂರು ಮಾಡಿಸಲಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಳದಕಟ್ಟಾದ 2025-26ನೇ ಸಾಲಿನ ವಿದ್ಯಾರ್ಥಿ ಸಂಸತ್, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುರೇಂದ್ರ ಎನ್. ದಫೇದಾರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜ್ಞಾನ ಹೆಚ್ಚಿದಂತೆ ಅವಕಾಶಗಳು ಹೆಚ್ಚು ತೆರೆದುಕೊಳ್ಳುತ್ತವೆ. ಪ್ರತಿ ಹಂತದಲ್ಲೂ ಜೀವನೋತ್ಸಾಹ ಇರಬೇಕು ಎಂದರು.

ಕಾಲೇಜಿನ ಪ್ರಾಚಾರ್ಯ ಭಾಸ್ಕರ ಎಸ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಲೀನಾ ಫರ್ನಾಂಡಿಸ್, ಲೀಲಾವತಿ ನಾಯ್ಕ, ತಾಪಂ ಮಾಜಿ ಅಧ್ಯಕ್ಷ ಸಿ.ಆರ್. ನಾಯ್ಕ, ವಿದ್ಯಾರ್ಥಿ ವೇದಿಕೆಯ ರಾಜೇಶ ನಾಯ್ಕ, ಯೋಶಿತಾ ಕೆ.ಎಸ್. ಉಪಸ್ಥಿತರಿದ್ದರು. ಉಪನ್ಯಾಸಕ ಕೆ.ಎಂ. ಲಕ್ಷ್ಮಣ ಸ್ವಾಗತಿಸಿದರು. ರಾಮಕೃಷ್ಣ ಸಭಾಹಿತ ಮನವಿ ವಾಚಿಸಿದರು. ನವ್ಯಾ ಮತ್ತು ಮಧು ಕಾರ್ಯಕ್ರಮ ನಿರ್ವಹಿಸಿದರು.