ಬೈಂದೂರು ಗಾಂಧಿ ಮೈದಾನದಲ್ಲಿ ತಹಸೀಲ್ದಾರ್ ಪ್ರದೀಪ್ ಆರ್. ಧ್ವಜಾರೋಹಣ ನೆರವೇರಿಸಿದರು. ಶಾಸಕ ಗುರುರಾಜ ಗಂಟಿಹೊಳೆ ಉಪಸ್ಥಿತರಿದ್ದರು 
ಜಿಲ್ಲೆ

ಮುಂದಿನ ಪೀಳಿಗೆಗೆ ದೇಶಪ್ರೇಮ ಬೆಳೆಸೋಣ

ಇಂದಿರಾ ಎನ್ ಕೆ

ಬೈಂದೂರು: ಭಾರತವನ್ನು ಸುತ್ತಮುತ್ತಲಿನ ದೇಶ ಅವಲಂಬನೆ ಜತೆೆಗೆ ಆಸರೆ ಬಯಸಿರುವುದು ನಮ್ಮ ದೇಶದ ಹೆಮ್ಮೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಬೈಂದೂರು ಗಾಂಧಿ ಮೈದಾನದಲ್ಲಿ ಗುರುವಾರ ಬೈಂದೂರು ತಾಲೂಕು ಆಡಳಿತ ಕಚೇರಿ ವತಿಯಿಂದ ನಡೆದ ಸ್ವಾತಂತ್ರೊೃೀತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದಿನ ಪೀಳಿಗೆಯಲ್ಲಿ ದೇಶಪ್ರೇಮ ಬೆಳೆಸಬೇಕು. ಮುಂದಿನ ದಿನದಲ್ಲಿ ಅದ್ದೂರಿ ಉತ್ಸವದ ಆಚರಣೆ ಮೂಲಕ ಬೈಂದೂರಿನ ಕನಸು ಗಟ್ಟಿಗೊಳಿಸಬೇಕಿದೆ ಎಂದರು. ತಹಸೀಲ್ದಾರ್ ಪ್ರದೀಪ್ ಆರ್. ಧ್ವಜಾರೋಹಣ ನೆರವೇರಿಸಿದರು. ಬೈಂದೂರು ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ವೃತ್ತ ನಿರೀಕ್ಷಕ ಸವಿತ್ರ ತೇಜ್, ಪಪಂ ಮುಖ್ಯಾಧಿಕಾರಿ ಅಜಯ್ ಭಂಡಾರ್‌ಕರ್ ಉಪಸ್ಥಿತರಿದ್ದರು. ನಿವೃತ್ತ ಸೈನಿಕ ವಿಠ್ಠಲ ಹೆಬ್ಬಾಗಿಲು ಅವರನ್ನು ಸನ್ಮಾನಿಸಲಾಯಿತು. ಆರಕ್ಷಕ ಠಾಣೆ, ಅಗ್ನಿಶಾಮಕ ದಳ, ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಕೆ. ನಾಯ್ಕ ಸ್ವಾಗತಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ನಿರೂಪಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ವಂದಿಸಿದರು.